ನಟಿ ಗಾಯತ್ರಿ ರಘುರಾಮ್ 
ದೇಶ

'ಮಹಿಳೆಯರಿಗೆ ಸುರಕ್ಷಿತವಲ್ಲ'; ಬಿಜೆಪಿಗೆ ಗುಡ್ ಬೈ ಹೇಳಿದ ನಟಿ ಗಾಯತ್ರಿ ರಘುರಾಮ್, ಅಣ್ಣಾಮಲೈ ವಿರುದ್ಧ ಕಿಡಿ

ತಮಿಳುನಾಡು ಬಿಜೆಪಿ ನಾಯಕಿ ಗಾಯತ್ರಿ ರಘುರಾಮ್ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ತಮಿಳುನಾಡು ಬಿಜೆಪಿ ಘಟಕ ಮಹಿಳೆಯರಿಗೆ ಸುರಕ್ಷಿತವಲ್ಲ ಎಂದು ಬಿಜೆಪಿ ಅಧ್ಯಕ್ಷ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಕಿಡಿಕಾರಿದ್ದಾರೆ.

ಚೆನ್ನೈ: ತಮಿಳುನಾಡು ಬಿಜೆಪಿ ನಾಯಕಿ ಗಾಯತ್ರಿ ರಘುರಾಮ್ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ತಮಿಳುನಾಡು ಬಿಜೆಪಿ ಘಟಕ ಮಹಿಳೆಯರಿಗೆ ಸುರಕ್ಷಿತವಲ್ಲ ಎಂದು ಬಿಜೆಪಿ ಅಧ್ಯಕ್ಷ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಕಿಡಿಕಾರಿದ್ದಾರೆ.

ಹೌದು.. ನಟಿ ಹಾಗೂ ತಮಿಳುನಾಡು ಬಿಜೆಪಿ ಮಹಿಳಾ ಘಟಕದ ನಾಯಕಿ ಗಾಯತ್ರಿ ರಘುರಾಮ್ ಅವರು ಬಿಜೆಪಿಗೆ ಮಂಗಳವಾರ ರಾಜೀನಾಮೆ ನೀಡಿದ್ದು, ಗಾಯತ್ರಿ ಅವರೇ ಟ್ವೀಟ್‌ ಮಾಡಿ ಬಿಜೆಪಿಗೆ ರಾಜೀನಾಮೆ ನೀಡಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

'ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ಮಹಿಳೆಯರಿಗೆ ಗೌರವ, ಸಮಾನ ಅವಕಾಶಗಳು ಸಿಗುತ್ತಿಲ್ಲ ಎಂದಿರುವ ಅವರು, ಭಾರವಾದ ಹೃದಯದಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಅಣ್ಣಾಮಲೈ ಅವರ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲವಾಗಿದೆ. ಇದರಿಂದಾಗಿ ನಾನು ಪಕ್ಷ ತೊರೆಯುತ್ತಿದ್ದೇನೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಮೋದಿಜಿ ನೀವು ವಿಶೇಷ, ನೀವು ರಾಷ್ಟ್ರಪಿತ, ನೀವು ಯಾವಾಗಲೂ ನನ್ನ ವಿಶ್ವಗುರು ಮತ್ತು ಮಹಾನ್ ನಾಯಕ. ಅಮಿತ್ ಶಾ ಜೀ ನೀವು ಯಾವತ್ತೂ ನನ್ನ ಚಾಣಕ್ಯ ಗುರುಗಳಾಗಿಯೇ ಇರುತ್ತೀರಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಅಣ್ಣಾಮಲೈ ವಿರುದ್ಧ ಕಿಡಿ
ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿರುವ ಮಾಜಿ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ವಿರುದ್ಧ ಗಾಯತ್ರಿ ರಘುರಾಮ್‌ ಗಂಭೀರ ಆರೋಪ ಮಾಡಿದ್ದು, 'ಅಣ್ಣಾಮಲೈ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ, 6 ತಿಂಗಳು ಅಮಾನತು ಮಾಡಿ ಪಕ್ಷದಿಂದ ದೂರವಿರಿಸಿದರು. ಪಕ್ಷದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. 

ಆರೋಪ ತಳ್ಳಿ ಹಾಕಿದ ಅಣ್ಣಾಮಲೈ
ಇನ್ನು ಗಾಯತ್ರಿ ರಘುರಾಮ್ ಅವರ ಆರೋಪಗಳನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ತಳ್ಳಿಹಾಕಿದ್ದು, ಆಕೆಯಿಂದ ಪಕ್ಷಕ್ಕೆ ನಷ್ಟವಿಲ್ಲ ಎಂದಿದ್ದಾರೆ. ಅಂತೆಯೇ ಆರೋಪಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಇನ್ನು ಗಾಯತ್ರಿ ರಘುರಾಮನ್‌ ಅವರು ಪಕ್ಷದ ಶಿಸ್ತು ಉಲ್ಲಂಘನೆ, ಪಕ್ಷಕ್ಕೆ ಮುಜುಗರ ಉಂಟುಮಾಡುವುದು, ಪಕ್ಷದ ನಿಯಮಗಳನ್ನು ಮೀರುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿದ್ದರಿಂದ ಅವರನ್ನು ಪಕ್ಷದಿಂದ 6 ತಿಂಗಳವರೆಗೆ ಅಮಾನತ್ತು ಮಾಡಲಾಗಿತ್ತು. ಗಾಯತ್ರಿ ರಘುರಾಮ್‌ ಅವರು ಮಹಿಳಾ ಘಟಕದ ಅಧ್ಯಕ್ಷೆ ಮಾತ್ರವಲ್ಲದೇ ಸಾಗರೋತ್ತರ ತಮಿಳು ಅಭಿವೃದ್ಧಿ ವಿಭಾಗದ ಅಧ್ಯಕ್ಷೆಯಾಗಿಯೂ ಕೆಲಸ ಮಾಡಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT