ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ 
ದೇಶ

ಜ.16, 17 ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ;  ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಡ್ಡಾ ಮತ್ತೊಂದು ಅವಧಿಗೆ ಆಯ್ಕೆ ಸಾಧ್ಯತೆ

ಜ.16, 17 ರಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತೊಂದು ಅವಧಿಗೆ ಪುನರಾಯ್ಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ನವದೆಹಲಿ: ಜ.16, 17 ರಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತೊಂದು ಅವಧಿಗೆ ಪುನರಾಯ್ಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಮುಂಬರುವ ವಿಧಾನಸಭಾ ಚುನಾವಣೆಗಳು ಹಾಗೂ 2024 ರ ಲೋಕಸಭಾ ಚುನಾವಣೆಗಳ ತಯಾರಿ ಹಾಗೂ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ, ನಿರ್ಧಾರಗಳಾಗಲಿವೆ.

ಪ್ರಧಾನಿ ನರೇಂದ್ರ ಮೋದಿ ಸೇರಿ, ದೇಶಾದ್ಯಂತ ಇರುವ ಪಕ್ಷದ ಹಿರಿಯ ನಾಯಕರು ರಾಷ್ಟ್ರೀಯ ಕಾರ್ಯಕಾರಿಣಿಯ ಭಾಗವಾಗಿದ್ದಾರೆ.

ಇನ್ನು ಸಭೆಯಲ್ಲಿ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ಹಾಗೂ ಅದು ಪ್ರಸ್ತಾಪಿಸುತ್ತಿರುವ ವಿಷಯಗಳಾದ "ದ್ವೇಷ ಹಾಗೂ ವಿಭಜನೆ" ಅಜೆಂಡಾಗೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಪ್ರಬಲ ಪ್ರತಿತಂತ್ರ ಹೆಣೆಯುವುದು ಹಾಗೂ ವಿಪಕ್ಷಗಳ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇನ್ನು ಭಾರತ ಜಿ-20 ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದು ದೇಶಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು, ಭಾರತದಿಂದ ನೆರವು

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video