ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 134 ಹೊಸ ಪ್ರಕರಣ ಪತ್ತೆಯಾಗಿದೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,78,956ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,707ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,582ಕ್ಕೆ ಇಳಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 222 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,45,667ಕ್ಕೆ ತಲುಪಿದೆ.
ಇದನ್ನೂ ಓದಿ: ಕೋವಿಡ್ ಭೀತಿ: ಹೈರಿಸ್ಕ್ ದೇಶಗಳಿಂದ ಬಂದವರಿಗೆ 7 ದಿನಗಳ ಕ್ವಾರಂಟೈನ್ ಕಡ್ಡಾಯ, ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ!
ಇನ್ನು ಭಾರತದಲ್ಲಿ ಒಂದೇ 1,51,186 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 91,11,67,976 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,11,23,642 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.