ಕಾಶ್ಮೀರದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ 
ದೇಶ

ಕುಪ್ವಾರ: ಎಲ್ಎಸಿ ಬಳಿ ಸೇನೆ ವಶಕ್ಕೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ಹೆಚ್ಚಾಗುತ್ತಿರುವ ಬೆನ್ನಲ್ಲೆ ಕುಪ್ವಾರದ ಬಳಿ ಇರುವ ಎಲ್ಎಸಿಯಲ್ಲಿ ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮದ್ದು ಗುಂಡುಗಳನ್ನು ವಶಕ್ಕೆ ಪಡೆದಿದೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ಹೆಚ್ಚಾಗುತ್ತಿರುವ ಬೆನ್ನಲ್ಲೆ ಕುಪ್ವಾರದ ಬಳಿ ಇರುವ ಎಲ್ಎಸಿಯಲ್ಲಿ ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮದ್ದು ಗುಂಡುಗಳನ್ನು ವಶಕ್ಕೆ ಪಡೆದಿದೆ.

ಈ ಬಗ್ಗೆ ಪೊಲೀಸ್ ಇಲಾಖೆ ಮಾಹಿತಿ ನೀಡಿದ್ದು, ನಿರ್ದಿಷ್ಟ ಮಾಹಿತಿಯನ್ನು ಆಧರಿಸಿ ಪೊಲೀಸರು ಹಾಗೂ ಸೇನಾ ವಿಭಾಗದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದಾಗ ಜಿಲ್ಲೆಯ ಸದ್ಪೋರಾ ತಾದ್ ಗ್ರಾಮದ ಕರ್ಣಃ ಎಂಬ ಪ್ರದೇಶದಲ್ಲಿ ಈ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ.  

ಪೊಲೀಸ್ ವಕ್ತಾರರು ನೀಡಿರುವ ಮಾಹಿತಿಯ ಪ್ರಕಾರ, ಕಾರ್ಯಾಚರಣೆಯ ವೇಳೆ ಜಂಟಿ ತಂಡ ಮೂರು ಪಿಸ್ತೂಲ್ ಗಳು, ಮೂರು ಪಿಸ್ತೂಲ್ ಮ್ಯಾಗ್ಜಿನ್ ಗಳು, 22 ಪಿಸ್ತೂಲ್ ರೌಂಡ್ ಹಾಗೂ ಮೂರು ಚೀನಾ ಗ್ರೆನೇಡ್ ಗಳನ್ನು ಶಮೀಮ್ ಅಹ್ಮದ್ ಶೇಖ್ ಎಂಬಾತನಿಗೆ ಸೇರಿದ ಮನೆಯಲ್ಲಿ ವಶಕ್ಕೆ ಪಡೆದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು, ಮೆಟ್ರೋ ಸಂಚಾರ ವ್ಯತ್ಯಯ!

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ತಿರಸ್ಕಾರ: 'ಸುಪ್ರೀಂ' ತೀರ್ಪು ಸ್ವಾಗತಿಸಿದ ಡಿಕೆ ಶಿವಕುಮಾರ್

ಮೂಲಭೂತವಾದಿಗಳ ಒತ್ತಡಕ್ಕೆ ಮಣಿದ ಪಾಕ್ ಸರ್ಕಾರ; ಹಿಂದೂ ಹೆಸರುಗಳ ಮರು ನಾಮಕರಣ ಮುಂದೂಡಿಕೆ!

SCROLL FOR NEXT