ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ: ವಿಕೃತಿ ಮೆರೆದ ವ್ಯಕ್ತಿಗಾಗಿ ಪೊಲೀಸರಿಂದ ಶೋಧ

ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದ ವ್ಯಕ್ತಿಯನ್ನು ಪೊಲೀಸರು ಶೋಧಕಾರ್ಯಾಚರಣೆ ನಡೆಸುತ್ತಿದ್ದಾರೆ.

ಏರ್ ಇಂಡಿಯಾ
Srinivas Rao BV
Updated On : 5 Jan 2023, 3:06 pm

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದ ವ್ಯಕ್ತಿಯನ್ನು ಪೊಲೀಸರು ಶೋಧಕಾರ್ಯಾಚರಣೆ ನಡೆಸುತ್ತಿದ್ದಾರೆ. 

ನ್ಯೂಯಾರ್ಕ್ ನಿಂದ ದೆಹಲಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ವ್ಯಕ್ತಿಯ ದೂರಿನ ಆಧಾರದಲ್ಲಿ ಪೊಲೀಸರು ವಿಮಾನಯಾನ ನಿಯಮಗಳ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. 

ಸಾರ್ವಜನಿಕ ಸ್ಥಳದಲ್ಲಿ ದುರ್ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಸೆಕ್ಷನ್ 294 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

Advertisement

ಇದನ್ನೂ ಓದಿ: ಕುಡಿದ ಅಮಲಿನಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ: ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಘಟನೆ!

ಆರೋಪಿಯನ್ನು ಪತ್ತೆ ಮಾಡಲು ಹಲವು ತಂಡಗಳನ್ನು ರಚಿಸಲಾಗಿದೆ. ಆತನನ್ನು ಶೀಘ್ರವೇ ಬಂಧಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ರೀತಿ ವಿಕೃತಿ ಮೆರೆದ ಪ್ರಯಾಣಿಕನಿಗೆ ಏರ್ ಇಂಡಿಯಾ 30 ದಿನಗಳ ಪ್ರಯಾಣ ನಿಷೇಧವನ್ನು ವಿಧಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement