ಘಟನಾ ಸ್ಥಳ 
ದೇಶ

ಕಾಂಜಾವಾಲಾ ಪ್ರಕರಣ: ಕಾರಿನೊಳಗೆ ಮಹಿಳೆಯಿದ್ದ ಯಾವುದೇ ಚಿಹ್ನೆಗಳು ಕಂಡು ಬಂದಿಲ್ಲ- ಎಫ್ಎಸ್ಎಲ್

ದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣದಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವ ಮಾತುಗಳು ಕೇಳಿಬರುತ್ತಿರುವ ನಡುವಲ್ಲೇ ಕಾರಿನೊಳಗೆ ಮಹಿಳೆಯಿಂದ್ದ ಯಾವುದೇ ಚಿಹ್ನೆಗಳು ಕಂಡುಬಂದಿಲ್ಲ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ಬುಧವಾರ ಸ್ಪಷ್ಟಪಡಿಸಿದೆ.

ನವದೆಹಲಿ: ದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣದಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವ ಮಾತುಗಳು ಕೇಳಿಬರುತ್ತಿರುವ ನಡುವಲ್ಲೇ ಕಾರಿನೊಳಗೆ ಮಹಿಳೆಯಿಂದ್ದ ಯಾವುದೇ ಚಿಹ್ನೆಗಳು ಕಂಡುಬಂದಿಲ್ಲ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ಬುಧವಾರ ಸ್ಪಷ್ಟಪಡಿಸಿದೆ.

ಹೆಚ್ಚಿನ ರಕ್ತದ ಕಲೆಗಳು ಕಾರಿನ ಮುಂಭಾಗದ ಎಡ ಚಕ್ರದ ಹಿಂದೆ ಕಂಡುಬಂದಿದ್ದು, ಮಹಿಳೆಯು ವಾಹನದ ಮುಂಭಾಗದ ಎಡ ಚಕ್ರಕ್ಕೆ ಸಿಲುಕಿಕೊಂಡಿದ್ದಳು ಎಂದು ತಿಳಿಸಿದೆ.

ಮಹಿಳೆಯು ವಾಹನದ ಮುಂಭಾಗದ ಎಡ ಚಕ್ರಕ್ಕೆ ಸಿಲುಕಿಕೊಂಡಿದ್ದು, ಹೆಚ್ಚಿನ ರಕ್ತದ ಕಲೆಗಳು ಮುಂಭಾಗದ ಎಡ ಚಕ್ರದ ಹಿಂದೆ ಕಂಡುಬಂದಿವೆ. ಕಾರಿನ ಕೆಳಗೆ ಇತರ ಭಾಗಗಳಲ್ಲಿಯೂ ರಕ್ತದ ಕಲೆಗಳು ಕಂಡುಬಂದಿವೆ. ಆದರೆ, ಇಲ್ಲಿಯವರೆಗೆ ಕಾರಿನೊಳಗೆ ಮಹಿಳೆಯಿದ್ದ ಯಾವುದೇ ಕುರುಹುಗಳ ಪತ್ತೆಯಾಗಿಲ್ಲ ಎಂದು ಹೇಳಿದೆ.

ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವವರ ರಕ್ತದ ಮಾದರಿಯನ್ನೂ ಎಫ್ಎಸ್ಎಲ್'ಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯ ಹೊರಭಾಗದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಹಲವು ಕಿಲೋಮೀಟರ್‌ಗಳವರೆಗೆ ಮಹಿಳೆಯ ದೇಹ ಎಳೆದೊಯ್ದು ಹತ್ಯೆಗೀಡಾದ 20ರ ಹರೆಯದ ಮಹಿಳೆಯ ಪ್ರಕರಣ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

ಈ ಸಂಬಂಧ ನಿನ್ನೆಯಷ್ಟೇ ಘಟನೆ ವೇಳೆ ಮಹಿಳೆ ಸ್ಕೂಟಿಯಲ್ಲಿ ಒಬ್ಬಳೇ ಇರಲಿಲ್ಲ, ಆಕೆಯ ಜೊತೆಗೆ ಸ್ನೇಹಿತೆ ಕೂಡ ಇದ್ದಳು ಎಂಬುದು ತಿಳಿದುಬಂದಿತ್ತು. ಅಪಘಾತ ಸಂಭವಿಸಿದ ಬಳಿಕ ಕೆಳಗೆ ಬಿದ್ದ ಸ್ನೇಹಿತೆಗೆ ಸಣ್ಣಪುಟ್ಟ ಗಾಯಗಳಾಗಿತ್ತು ಎಂಬುದು ತಿಳಿದುಬಂದಿತ್ತು.

ಘಟನೆ ಕುರಿತು ಪ್ರತ್ಯದರ್ಶಿಗಳು ಮಾಹಿತಿ ನೀಡಿದ್ದು, ಮಹಿಳೆ ಕಾರಿನಡಿ ಸಿಲುಕಿಕೊಂಡಿರುವುದು ಗೊತ್ತಿದ್ದರೂ ಆರೋಪಿಗಳು ವಾಹನವನ್ನು ಉದ್ದೇಶಪೂರ್ವಕವಾಗಿಯೇ ಚಲಾಯಿಸುತ್ತಿದ್ದರು ಎಂದು ಹೇಳಿದ್ದಾರೆ.

ಕಾರಿನಡಿ ಮಹಿಳೆ ಸಿಲುಕಿರುವುದು ಅವರಿಗೆ ತಿಳಿದಿತ್ತು. ಆಕೆಯನ್ನು ತೊಡೆದುಹಾಕರು ಹಿಂದೆ-ಮುಂದೆ ಕಾರು ಚಲಾಯಿಸಿದ್ದರು. ಆದರೆ, ಅಂಜಲಿಯವರ ದೇಹದ ಭಾಗ ಕಾರಿನ ಭಾಗಗಳಲ್ಲಿ ಸಿಲುಕಿಕೊಂಡಿತ್ತು. ಅಂಜಲಿಯವರು ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದರು, ಆದರೆ, ಅವರು ಈ ಬಗ್ಗೆ ಗಮನಕೊಡದಂತೆ ಕಾರು ಚಲಾಯಿಸಿದ್ದರು ಎಂದು ಮೃತ ಮಹಿಳೆಯ ಸ್ನೇಹಿತೆ ನಿಧಿ ಕೂಡ ಖಾಸಗಿ ವಾಹನಿಯೊಂದರಲ್ಲಿ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT