ದೇಶ

ದೇಶದಲ್ಲಿ ಹೆಚ್ಚಾದ ಕೋವಿಡ್-19 ಭೀತಿ: 188 ಹೊಸ ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ

Ramyashree GN

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 188 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,554ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 4,46,79,319 ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 5,30,710ಕ್ಕೆ ಏರಿಕೆಯಾಗಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 0.10ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 0.12ರಷ್ಟಿದೆ. ಇದೇ ವೇಳೆ ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಈವರೆಗೂ 4,41,46,055 ಮಂದಿ ಕೊರೊನಾವೈರಸ್ ಸೋಂಕಿನಿಂದ ಗುಣಮುಖರಾಗಿದ್ದು, ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ 220.12 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

SCROLL FOR NEXT