ದೇಶ

ಮುಂಬೈ ವಿಶೇಷ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ದೇವೆನ್ ಭಾರ್ತಿ

Lingaraj Badiger

ಮುಂಬೈ: ಹಿರಿಯ ಐಪಿಎಸ್ ಅಧಿಕಾರಿ ದೇವೆನ್ ಭಾರ್ತಿ ಅವರು ಗುರುವಾರ ಮುಂಬೈ ವಿಶೇಷ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಮಹಾರಾಷ್ಟ್ರ ಸರ್ಕಾರ, ರಾಷ್ಟ್ರ ರಾಜಧಾನಿ ದೆಹಲಿಯ ಮಾದರಿಯಲ್ಲಿ ವಿಶೇಷ ಪೊಲೀಸ್ ಆಯುಕ್ತರ ಹುದ್ದೆಯನ್ನು ಸೃಷ್ಟಿಸಿ ಬುಧವಾರ ಆದೇಶ ಹೊರಡಿಸಿತ್ತು. ಅಲ್ಲದೆ ಆ ಹೊಸ ಹುದ್ದೆಗೆ ಹಿರಿಯ ಐಪಿಎಸ್ ಅಧಿಕಾರಿ ದೇವೆನ್ ಭಾರ್ತಿ ಅವರನ್ನು ನೇಮಕ ಮಾಡಿದೆ.

1994ನೇ ಬ್ಯಾಚ್ ಐಪಿಎಸ್ ಅಧಿಕಾರಿ, ಪ್ರಸ್ತುತ ಹೆಚ್ಚುವರಿ ಮಹಾನಿರ್ದೇಶಕರಾಗಿರುವ ಭಾರ್ತಿ ಅವರು ಪೋಸ್ಟಿಂಗ್‌ಗಾಗಿ ಕಾಯುತ್ತಿದ್ದರು. ಇದಕ್ಕು ಮುನ್ನ ನಗರದಲ್ಲಿ ಜಂಟಿ ಪೊಲೀಸ್ ಕಮಿಷನರ್(ಕಾನೂನು ಮತ್ತು ಸುವ್ಯವಸ್ಥೆ) ಆಗಿದ್ದರು.

SCROLL FOR NEXT