ಸಾಂದರ್ಭಿಕ ಚಿತ್ರ 
ದೇಶ

ಥಾಣೆ: ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಹೆವಿ ಮೆಟಲ್ ಪ್ಲೇಟ್ ಮೇಲೆ ಬಿದ್ದು ಮಹಿಳೆ ಸಾವು

ಗುರುವಾರ ಬೆಳಗ್ಗೆ ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮೆಟ್ರೋ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಹೆವಿ ಮೆಟಲ್ ಪ್ಲೇಟ್ ಬಿದ್ದು 37 ವರ್ಷದ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ನಾಗರಿಕ ಅಧಿಕಾರಿಗಳು ತಿಳಿಸಿದ್ದಾರೆ.

ಥಾಣೆ: ಗುರುವಾರ ಬೆಳಗ್ಗೆ ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮೆಟ್ರೋ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಹೆವಿ ಮೆಟಲ್ ಪ್ಲೇಟ್ ಬಿದ್ದು 37 ವರ್ಷದ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ನಾಗರಿಕ ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿನ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಮಾಲ್ ಬಳಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಸ್ಕ್ರ್ಯಾಪ್ ಕಲೆಕ್ಟರ್ ಆಗಿದ್ದ ಮಹಿಳೆ ಗರ್ಡರ್ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಕೆಳಗಿದ್ದರು. ಈ ವೇಳೆ ಗರ್ಡರ್‌ನಿಂದ ಲೋಹದ ತಟ್ಟೆ ಆಕೆಯ ಮೇಲೆ ಬಿದ್ದಿದೆ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಷನ್‌ನ ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶ (ಆರ್‌ಡಿಎಂಸಿ) ಮುಖ್ಯಸ್ಥ ಅವಿನಾಶ್ ಸಾವಂತ್ ಹೇಳಿದ್ದಾರೆ.

ರಾಬೋಡಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು, ಮಹಿಳೆ ಬ್ಯಾರಿಕೇಡ್ ಅನ್ನು ದಾಟಿ ಪಿಲ್ಲರ್‌ಗಾಗಿ (ನಿರ್ಮಾಣ ಸ್ಥಳದಲ್ಲಿ) ಅಗೆದ ಹೊಂಡದ ಸಮೀಪ ಆಗಮಿಸಿದರು. ಈ ವೇಳೆ ಅವಘಡ ಸಂಭವಿಸಿದೆ.

ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿ ಮತ್ತು ಆರ್‌ಡಿಎಂಸಿಯ ತಂಡವು ಸ್ಥಳಕ್ಕೆ ಧಾವಿಸಿ ಆಕೆಯನ್ನು ಹೊಂಡದಿಂದ ಹೊರತೆಗೆದಿದೆ. ಸುನೀತಾ ಕಾಂಬಳೆ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸಾವಂತ್ ಹೇಳಿದರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಸಾವಂತ್ ತಿಳಿಸಿದ್ದಾರೆ.

ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

SCROLL FOR NEXT