ಸಾಂದರ್ಭಿಕ ಚಿತ್ರ 
ದೇಶ

ಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್, ಹಣ್ಣುಗಳ ಪೂರೈಕೆಗೆ ಪಶ್ಚಿಮ ಬಂಗಾಳ ಸರ್ಕಾರ ನಿರ್ಧಾರ

ಇದೇ ತಿಂಗಳ 23 ರಿಂದ ಮುಂದಿನ ನಾಲ್ಕು ತಿಂಗಳವರೆಗೂ ಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್ ಮತ್ತು ಹಣ್ಣಗಳನ್ನು ಪೂರೈಸಲು ಪಶ್ಚಿಮ ಬಂಗಾಳ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಸರ್ಕಾರ ರೂ.371 ಕೋಟಿ ರೂ. ಹಂಚಿಕೆ ಮಾಡಿದೆ.

ಕೊಲ್ಕತ್ತ: ಇದೇ ತಿಂಗಳ 23 ರಿಂದ ಮುಂದಿನ ನಾಲ್ಕು ತಿಂಗಳವರೆಗೂ ಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್ ಮತ್ತು ಹಣ್ಣಗಳನ್ನು ಪೂರೈಸಲು ಪಶ್ಚಿಮ ಬಂಗಾಳ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಸರ್ಕಾರ ರೂ.371 ಕೋಟಿ ರೂ. ಹಂಚಿಕೆ ಮಾಡಿದೆ.

ಪ್ರಧಾನ ಮಂತ್ರಿ ಪೋಷಣ್ ಅಭಿಯಾನದಡಿ ಮುಂದಿನ ನಾಲ್ಕು ತಿಂಗಳ ಕಾಲ ವಾರಕ್ಕೊಮ್ಮೆಯಂತೆ  ಹೆಚ್ಚುವರಿ ಪೌಷ್ಠಿಕಯುಕ್ತ ಆಹಾರವಾಗಿ  ಚಿಕನ್ ಮತ್ತು ಆಯಾ ಋತುವಿನ ಹಣ್ಣುಗಳನ್ನು ಪೂರೈಸಲಾಗುವುದು ಎಂದು ಅಧಿಕೃತ ನೋಟಿಫಿಕೇಷನ್ ನಲ್ಲಿ ಹೇಳಲಾಗಿದೆ.

ಹೊಸ ಯೋಜನೆಯಲ್ಲಿ ಹೆಚ್ಚುವರಿ ಪೌಷ್ಠಿಕಾಂಶಯುಕ್ತ ಆಹಾರ ಪೂರೈಕೆಗೆ ಪ್ರತಿ ವಿದ್ಯಾರ್ಥಿಗಳಿಗೆ ವಾರಕ್ಕೆ ರೂ.20 ರಷ್ಟು ವೆಚ್ಚ ಮಾಡಲಾಗುವುದು, ಈ ಪ್ರಕ್ರಿಯೆ 16 ವಾರಗಳ ಕಾಲ ಮುಂದುವರೆಯಲಿದೆ ಎಂದು ಹೇಳಲಾಗಿದೆ.

ಪ್ರಸ್ತುತ ವಿದ್ಯಾರ್ಥಿಗಳಿಗೆ ಬಿಸಿಯೂಟದಲ್ಲಿ ಅನ್ನ, ಬೇಳೆ, ತರಕಾರಿ, ಸೋಯಾಬಿನ್ ಮತ್ತು ಮೊಟ್ಟೆಗಳನ್ನು ನೀಡಲಾಗುತ್ತಿದೆ. ಇದೇ ತಿಂಗಳ 23 ರಿಂದ ಏಪ್ರಿಲ್ 23ರವರೆಗೂ ವಾರದ ವಿವಿಧ ದಿನಗಳಲ್ಲಿ ಹೆಚ್ಚುವರಿ ಆಹಾರ ಪದಾರ್ಥಗಳನ್ನು ಪೂರೈಸಲಾಗುವುದು ಎಂದು ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT