ದೇಶ

ಹೊಸ ಉಗ್ರ ಸಂಘಟನೆ ಸ್ಥಾಪಿಸಲು ಸಂಚು ರೂಪಿಸಿದ್ದ ಅಸ್ಸಾಂ ಮಾಜಿ ಶಾಸಕ ಸೇರಿ ಮೂವರ ಬಂಧನ

Lingaraj Badiger

ಗುವಾಹಟಿ: ಉಗ್ರಗಾಮಿ ಸಂಘಟನೆ ಸ್ಥಾಪಿಸಲು ಯತ್ನಿಸಿದ ಆರೋಪದ ಮೇಲೆ ಅಸ್ಸಾಂನ ಮಾಜಿ ಶಾಸಕ ಸೇರಿ ಮೂವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಕೊಕ್ರಜಾರ್ ಜಿಲ್ಲೆಯ ಮಾಜಿ ಶಾಸಕ ಹಿತೇಶ್ ಬಸುಮತರಿ ಅವರ ನಿವಾಸದಲ್ಲಿ ಪೊಲೀಸರು ಶೋಧ ನಡೆಸಿದ್ದು, ಈ ವೇಳೆ ಒಂದು ಎಕೆ 47 ಮತ್ತು ಒಂದು ಎಂ16 ರೈಫಲ್ ಹಾಗೂ 100 ಜೀವಂತ ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಅಸ್ಸಾಂ ಮಾಜಿ ಶಾಸಕ ಹಿತೇಶ್ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ಅವರ ವಿಚಾರಣೆ ನಡೆಯುತ್ತಿದೆ ಎಂದು ಕೋಕ್ರಜಾರ್ ಪೊಲೀಸ್ ಅಧೀಕ್ಷಕ ಪುಷ್ಪರಾಜ್ ಸಿಂಗ್ ಅವರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

"ಈ ಮೂವರು ಹೊಸ ಭಯೋತ್ಪಾದಕ ಸಂಘಟನೆಯನ್ನು ಸ್ಥಾಪಿಸಲು ಸಂಚು ರೂಪಿಸುತ್ತಿದ್ದರು. ಅದರ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ" ಎಂದು ಎಸ್ಪಿ ಹೇಳಿದ್ದಾರೆ.

"ನಾವು ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದಿದ್ದೇವೆ" ಎಂದು ಸಿಂಗ್ ತಿಳಿಸಿದ್ದಾರೆ.

SCROLL FOR NEXT