ಸಿಎಂ ಪುಷ್ಕರ್ ಸಿಂಗ್ ಧಾಮಿ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಾಂದರ್ಭಿಕ ಚಿತ್ರ 
ದೇಶ

ಜೋಶಿ ಮಠ ಭೂ ಕುಸಿತ: ಪುಷ್ಕರ್ ಸಿಂಗ್ ಧಾಮಿ ಜೊತೆಗೆ  ಪ್ರಧಾನಿ ಮೋದಿ ಮಾತುಕತೆ, ಎಲ್ಲಾ ಸಹಕಾರದ ಭರವಸೆ 

ಜೋಶಿಮಠದಲ್ಲಿ ಭೂ ಕುಸಿತ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಎಲ್ಲಾ ರೀತಿಯ ಸಹಕಾರ ಒದಗಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಭರವಸೆ ನೀಡಿದ್ದಾರೆ. 

ನವದೆಹಲಿ: ಜೋಶಿಮಠದಲ್ಲಿ ಭೂ ಕುಸಿತ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಎಲ್ಲಾ ರೀತಿಯ ಸಹಕಾರ ಒದಗಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಭರವಸೆ ನೀಡಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಜೋಶಿಮಠದಲ್ಲಿನ ಪರಿಸ್ಥಿತಿ ಬಗ್ಗೆ ವಿಚಾರಿಸಿದರು. ಜನರ ಸುರಕ್ಷತೆ ಮತ್ತು ಪುನರ್ವಸತಿಗೆ ಕ್ರಮ ಕೈಗೊಳ್ಳುವಂತೆ ಹೇಳಿದ್ದಾಗಿ ಧಾಮಿ ಹೇಳಿದ್ದಾರೆ.

ಜೋಶಿಮಠದಲ್ಲಿನ ಪರಿಸ್ಥಿತಿಯನ್ನು ವಿಶ್ಲೇಷಿಸಲಾಗುತ್ತಿದೆ. ಉತ್ತರಾಖಂಡ್ ನ ಇತರ ಪಟ್ಟಣಗಳ ಬಗ್ಗೆಯೂ ಪರಿಸ್ಥಿತಿಯನ್ನು ಅವಲೋಕಿಸಲಾಗುವುದು  ಎಂದ ಅವರು, ಜೋಶಿ ಮಠ ರಕ್ಷಣೆಗಾಗಿ ಸಾಧ್ಯವಿರುವ ಎಲ್ಲಾ ನೆರವು ನೀಡಲಾಗುವುದು ಎಂದು ಪ್ರಧಾನಿ ಭರವಸೆ ನೀಡಿದ್ದಾರೆ ಎಂದು ಉತ್ತರಾಖಂಡ್ ಸಿಎಂ ಹೇಳಿದರು. 

ಉತ್ತರಾಖಂಡ್ ನ ಚಮೋಲಿ ಜಿಲ್ಲೆಯ ಜೋಶಿಮಠದಲ್ಲಿ ಭೂ ಕುಸಿತ ಮುಂದುವರೆದಿರುವಂತೆಯೇ, ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದು ಪ್ರಧಾನಮಂತ್ರಿ ಕಾರ್ಯಾಲಯ ಭಾನುವಾರ ಹೇಳಿದೆ. ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಪಿಕೆ ಮಿಶ್ರಾ, ಕ್ಯಾಬಿನೆಟ್ ಕಾರ್ಯದರ್ಶಿ, ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಉತ್ತರಾಖಂಡ್ ನ ಹಿರಿಯ ಅಧಿಕಾರಿಗಳು ಕೂಡಾ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಸ್ಥಿತಿ ಪರಾಮರ್ಶನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಳೆದ ಕೆಲವು ದಿನಗಳಿಂದ ಪರ್ವತ ಪ್ರದೇಶದಲ್ಲಿ ಭೂ ಕುಸಿತ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ಸಭೆ ನಡೆಯುತ್ತಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT