ಪ್ರಾತಿನಿಧಿಕ ಚಿತ್ರ 
ದೇಶ

ಪಾಲ್ಘರ್: ದೇವಸ್ಥಾನದಲ್ಲಿ 70,000 ಮೌಲ್ಯದ ನಗದು, ಇತರ ಬೆಲೆಬಾಳುವ ವಸ್ತುಗಳ ಕಳ್ಳತನ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದೇವಸ್ಥಾನವೊಂದಕ್ಕೆ ಅಪರಿಚಿತ ವ್ಯಕ್ತಿಗಳು ನುಗ್ಗಿ ಸುಮಾರು 70,000 ರೂಪಾಯಿ ನಗದು ಹೊಂದಿದ್ದ ಕಾಣಿಕೆ ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದ್ದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದೇವಸ್ಥಾನವೊಂದಕ್ಕೆ ಅಪರಿಚಿತ ವ್ಯಕ್ತಿಗಳು ನುಗ್ಗಿ ಸುಮಾರು 70,000 ರೂಪಾಯಿ ನಗದು ಹೊಂದಿದ್ದ ಕಾಣಿಕೆ ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದ್ದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ದಾಪೋಲಿ ಗ್ರಾಮದ ರೇಣುಕಾ ಮಾತಾ ಮಂದಿರದಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಭಾನುವಾರ ಬೆಳಗ್ಗೆ ದೇವಸ್ಥಾನದ ಬಾಗಿಲಿನ ಬೀಗ ಒಡೆದಿರುವುದು ಮತ್ತು ಹಣದ ಪೆಟ್ಟಿಗೆ ಹಾಗೂ ದೇವಿಯ ವಿಗ್ರಹದ ಬೆಳ್ಳಿ ಸರ ನಾಪತ್ತೆಯಾಗಿರುವುದು ಪತ್ತೆಯಾಗಿದೆ.

ಅರ್ಚಕರು ನೀಡಿರುವ ದೂರಿನ ಆಧಾರದ ಮೇಲೆ, ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 380 (ಕಳ್ಳತನ) ಮತ್ತು 457 (ಅಪರಾಧ ಮಾಡುವ ಸಲುವಾಗಿ ರಾತ್ರಿಯಲ್ಲಿ ಮನೆ ಒಡೆಯುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪಾಲ್ಘರ್ ಜಿಲ್ಲೆಯ ಗ್ರಾಮೀಣ ನಿಯಂತ್ರಣ ಕೊಠಡಿಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಿ.ಎಂ. ಪವಾರ್ ಹೇಳಿದ್ದಾರೆ.

ಆರೋಪಿಗಳನ್ನು ಪತ್ತೆ ಹಚ್ಚುವ ಪ್ರಯತ್ನ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್