ಪ್ರಾತಿನಿಧಿಕ ಚಿತ್ರ 
ದೇಶ

ಉತ್ತರ ಪ್ರದೇಶದ ವಕೀಲೆ ಮೇಲೆ ಗ್ಯಾಂಗ್‌ ರೇಪ್: ಬಿಹಾರದ ಐಎಎಸ್ ಅಧಿಕಾರಿ, ಮಾಜಿ ಶಾಸಕರ ವಿರುದ್ಧ ಎಫ್‌ಐಆರ್

ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ನ್ಯಾಯಾಲಯದ ನಿರ್ದೇಶನದ ಮೇರೆಗೆ ಎಫ್‌ಐಆರ್ ದಾಖಲಿಸಿದ ನಂತರ ಬಿಹಾರ ಕೇಡರ್‌ನ ಹಿರಿಯ ಐಎಎಸ್ ಅಧಿಕಾರಿ ಸಂಜೀವ್ ಹನ್ಸ್ ಮತ್ತು ಆರ್‌ಜೆಡಿ ಮಾಜಿ ಶಾಸಕ ಗುಲಾಬ್ ಯಾದವ್ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪಾಟ್ನಾ: ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ನ್ಯಾಯಾಲಯದ ನಿರ್ದೇಶನದ ಮೇರೆಗೆ ಎಫ್‌ಐಆರ್ ದಾಖಲಿಸಿದ ನಂತರ ಬಿಹಾರ ಕೇಡರ್‌ನ ಹಿರಿಯ ಐಎಎಸ್ ಅಧಿಕಾರಿ ಸಂಜೀವ್ ಹನ್ಸ್ ಮತ್ತು ಆರ್‌ಜೆಡಿ ಮಾಜಿ ಶಾಸಕ ಗುಲಾಬ್ ಯಾದವ್ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹನ್ಸ್ ರಾಜ್ಯ ಇಂಧನ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರೆ, ಯಾದವ್ ಮಧುಬನಿ ಜಿಲ್ಲೆಯ ಝಂಜರ್‌ಪುರದ ಮಾಜಿ ಶಾಸಕರಾಗಿದ್ದಾರೆ.

2021ರಲ್ಲಿ ಅಲಹಾಬಾದ್ ಹೈಕೋರ್ಟ್‌ನ ಮಹಿಳಾ ವಕೀಲರನ್ನು ಬಿಹಾರದ ಮಹಿಳಾ ಆಯೋಗದ ಸದಸ್ಯರನ್ನಾಗಿ ಮಾಡುವುದಾಗಿ ಭರವಸೆ ನೀಡಿದ ನಂತರ ದೆಹಲಿಯ ಹೋಟೆಲ್‌ನಲ್ಲಿ ಅತ್ಯಾಚಾರವೆಸಗಿದ ಆರೋಪ ಹನ್ಸ್ ಮತ್ತು ಯಾದವ್ ಅವರ ಮೇಲಿದೆ.

ಸಂತ್ರಸ್ತೆಯ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ದಾನಪುರ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಶನಿವಾರ ಇಬ್ಬರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವಂತೆ ಆದೇಶಿಸಿದ್ದರು.

2021ರಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ಸಂಬಂಧ ಪೊಲೀಸರು ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದ ನಂತರ ನ್ಯಾಯಾಲಯವು ಈ ನಿರ್ದೇಶನವನ್ನು ನೀಡಿತು. ಆರಂಭದಲ್ಲಿ, ಪೊಲೀಸರು ಆರಂಭಿಕ ತನಿಖೆಯ ವರದಿಯನ್ನು ಸಲ್ಲಿಸುವಲ್ಲಿ ವಿಳಂಬವಾದ ಕಾರಣ ಮಹಿಳೆಯ ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು. ನಂತರ ದೂರುದಾರರು ಪಾಟ್ನಾ ಹೈಕೋರ್ಟ್‌ ಮೊರೆ ಹೋಗಿದ್ದರು. ಬಳಿಕ ಪ್ರಕರಣದ ಮರು ವಿಚಾರಣೆಗೆ ನ್ಯಾಯಾಲಯ ಆದೇಶಿಸಿತ್ತು. ಪಾಟ್ನಾ ಪೊಲೀಸರು ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಬೇಕು ಎಂದು ಹೇಳಿತ್ತು.

ಘಟನೆ ನಡೆದ ಸಮಯದಲ್ಲಿ ದೂರುದಾರರೊಂದಿಗೆ ಹನ್ಸ್ ಮತ್ತು ಯಾದವ್ ಇಬ್ಬರೂ ಹೋಟೆಲ್‌ನಲ್ಲಿ ಇದ್ದರು ಎಂದು ಪೊಲೀಸರು ವರದಿಯಲ್ಲಿ ತಿಳಿಸಿದ್ದಾರೆ.

ಆಗಿನ ಶಾಸಕ ಗುಲಾಬ್ ಯಾದವ್ ಅವರು ಪಾಟ್ನಾದ ತನ್ನ ಫ್ಲಾಟ್‌ನಲ್ಲಿ ಪಿಸ್ತೂಲ್ ತೋರಿಸಿ ಬೆದರಿಸಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಮತ್ತು ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ತನ್ನ ಹೆಸರನ್ನು ಮಹಿಳಾ ಸಮಿತಿಗೆ ಶಿಫಾರಸು ಮಾಡಲು ಬಯೋ-ಡೇಟಾದೊಂದಿಗೆ ತನ್ನ ಫ್ಲಾಟ್‌ಗೆ ಭೇಟಿ ನೀಡುವಂತೆ ಸಂತ್ರಸ್ತೆಗೆ ಹೇಳಿದ್ದರು. ಈ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸುವಂತೆ ದೂರು ಸಲ್ಲಿಸಿದ್ದರೂ, ಆರಂಭದಲ್ಲಿ ಪೊಲೀಸ್ ಅಧಿಕಾರಿಗಳು ಮೌನ ವಹಿಸಿದ್ದರು ಎಂದು ದೂರುದಾರರ ವಕೀಲರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT