ಉತ್ತರಾಖಂಡದಲ್ಲೂ ಕೊರೋನಾ ಹೊಸ ರೂಪಾಂತರಿ XBB 1.5 ಪತ್ತೆ
ಅಮೆರಿಕದಲ್ಲಿ ಕೋವಿಡ್ ಉಲ್ಬಣಕ್ಕೆ ಕಾರಣವಾದ COVID-19 ಹೊಸ ತಳಿ ಎಕ್ಸ್‌ಬಿಬಿ 1.5 ವೈರಸ್ ಉತ್ತರಾಖಂಡದಲ್ಲೂ ವರದಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಕ್ಸ್ಬಿಬಿ 1.5 ಪ್ರಕರಣಗಳ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.
ಡೆಹ್ರಾಡೂನ್: ಅಮೆರಿಕದಲ್ಲಿ ಕೋವಿಡ್ ಉಲ್ಬಣಕ್ಕೆ ಕಾರಣವಾದ COVID-19 ಹೊಸ ತಳಿ ಎಕ್ಸ್‌ಬಿಬಿ 1.5 ವೈರಸ್ ಉತ್ತರಾಖಂಡದಲ್ಲೂ ವರದಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಕ್ಸ್ಬಿಬಿ 1.5 ಪ್ರಕರಣಗಳ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.
ಇಂದು ಉತ್ತರಾಖಂಡದಲ್ಲಿ ಈ ಹೊಸ ಪ್ರಕರಣ ಪತ್ತೆಯಾಗಿದ್ದು, ಇದಕ್ಕೂ ಮುನ್ನ ಗುಜರಾತ್‌ನಲ್ಲಿ ಮೂರು, ಕರ್ನಾಟಕ, ತೆಲಂಗಾಣ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ತಲಾ ಒಂದು ಪ್ರಕರಣಗಳು ವರದಿಯಾಗಿವೆ ಎಂದು ಭಾರತೀಯ SARS-CoV-2 ಜೀನೋಮಿಕ್ಸ್ ಒಕ್ಕೂಟ(INSACOG) ತಿಳಿಸಿದೆ.
ಎಕ್ಸ್‌ಬಿಬಿ 1.5 ತಳಿಯು ಓಮಿಕ್ರಾನ್ ನ ಎಕ್ಸ್‌ಬಿಬಿ ರೂಪಾಂತರದ ಸಂಬಂಧಿಯಾಗಿದ್ದು, ಒಮಿಕ್ರಾನ್ ನ ಸಬ್‌ವೇರಿಯೆಂಟ್ ಎಕ್ಸ್‌ಬಿಬಿ 1.5 ಪ್ರಕರಣವು ಡಿಸೆಂಬರ್ 31 ರಂದು ಗುಜರಾತ್‌ನಲ್ಲಿ ಮೊದಲ ಬಾರಿಗೆ ವರದಿಯಾಗಿತ್ತು.
ಈಗಾಗಲೇ ಅಮೆರಿಕದಲ್ಲಿ ಶೇ. 40.5 ರಷ್ಟು ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿರುವ ಎಕ್ಸ್‌ಬಿಬಿ 1.5 ರೂಪಾಂತರಿ ಭಾರತದಲ್ಲೂ ಪತ್ತೆಯಾಗಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ.
ಈ ಮಧ್ಯೆ XBB.1.5 ರೂಪಾಂತರಿಯು ಮೇಲ್ನೋಟಕ್ಕೆ ಅಷ್ಟೊಂದು ಅಪಾಯಕಾರಿಯಲ್ಲ ಎಂಬುದಾಗಿ ತಜ್ಞರು ಹೇಳಿದ್ದಾರೆ. ಎಕ್ಸ್‌ಬಿಬಿ 1.5 ಹೊಸ ಕೋವಿಡ್ ರೂಪಾಂತರದ ಬಗ್ಗೆ ಹೆಚ್ಚು ಚಿಂತಿಸಬೇಕಾಗಿಲ್ಲ. ಏಕೆಂದರೆ, ಭಾರತದಲ್ಲಿ ಶೇ. 90ರಷ್ಟು ಜನರು ಲಸಿಕೆ ಪಡೆದಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.