ನೂತನ ಸಂಸತ್ ಭವನದ ನೀಲ ನಕ್ಷೆ 
ದೇಶ

ಜನವರಿ ಅಂತ್ಯಕ್ಕೆ ಹೊಸ ಸಂಸತ್ ಭವನ ಸಿದ್ಧ

 ಹೊಸ ಸಂಸತ್ ಭವನ ಜನವರಿ ಮಾಸಾಂತ್ಯದ ವೇಳೆಗೆ ಸಿದ್ಧಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಇಂಟೀರಿಯರ್ಸ್ ಗೆ ಅಂತಿಮ ಹಂತದ ಕಾಮಗಾರಿಗಳು ನಡೆಯುತ್ತಿದ್ದು, ವೇಗವಾಗಿ ಸಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ನವದೆಹಲಿ: ಹೊಸ ಸಂಸತ್ ಭವನ ಜನವರಿ ಮಾಸಾಂತ್ಯದ ವೇಳೆಗೆ ಸಿದ್ಧಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಇಂಟೀರಿಯರ್ಸ್ ಗೆ ಅಂತಿಮ ಹಂತದ ಕಾಮಗಾರಿಗಳು ನಡೆಯುತ್ತಿದ್ದು, ವೇಗವಾಗಿ ಸಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
 
ಸಂಸತ್ ನ ಬಜೆಟ್ ಅಧಿವೇಶವನ್ನು ಹೊಸ ಸಂಸತ್ ಭವನದಲ್ಲಿ ನಡೆಸುವುದೋ ಅಥವಾ ಈಗಿನ ಹಳೆಯ ಕಟ್ಟಡದಲ್ಲೋ ಎಂಬ ನಿರ್ಧಾರ ಇನ್ನಷ್ಟೇ ಕೈಗೊಳ್ಳಬೇಕಿದೆ. 

ಹೊಸ ಸಂಸತ್ ಭವನ ಸೆಂಟ್ರಲ್ ವಿಸ್ಟಾದ ಮರು ನಿರ್ಮಾಣದ ಭಾಗವಾಗಿದೆ. 2 ವರ್ಷಗಳ ಹಿಂದೆ ಸೆಂಟ್ರಲ್ ವಿಸ್ಟಾ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿತ್ತು. ದೇಶದ ಶಕ್ತಿಕೇಂದ್ರ ಸೆಂಟ್ರಲ್ ವಿಸ್ಟಾದ ಭಾಗವಾಗಿ ಹೊಸ ಸಂಸತ್ ನ್ನು ನಿರ್ಮಿಸಲಾಗುತ್ತಿದೆ. ಹೊಸ ಸಂಸತ್ ಭವನಕ್ಕೆ 2020 ರ ಡಿಸೆಂಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು.
 
ಹೊಸ ಸಂಸತ್ ಭವನವನ್ನು ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ನಿರ್ಮಿಸುತ್ತಿದ್ದು, ಭಾರತದ ಪ್ರಜಾಪ್ರಭುತ್ವದ ಪರಂಪರೆಯನ್ನು ಪ್ರದರ್ಶಿಸುವ ಭವ್ಯ ಸಂವಿಧಾನ ಹಾಲ್, ಗ್ರಂಥಾಲಯ, ಹಲವು ಸಮಿತಿಗಳ ಕೊಠಡಿಗಳು ಇರಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!