ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಭಾರತ್ ಜೋಡೋ ಯಾತ್ರೆ ಪಂಜಾಬ್ ಪ್ರವೇಶಕ್ಕೂ ಮುನ್ನ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಲಿರುವ ರಾಹುಲ್ ಗಾಂಧಿ

ಭಾರತ್ ಜೋಡೋ ಯಾತ್ರೆ ಬುಧವಾರ ಪಂಜಾಬ್ ಪ್ರವೇಶಿಸುವ ಮೊದಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಲಿದ್ದಾರೆ.

ರಾಹುಲ್ ಗಾಂಧಿ
Ramyashree GN
Updated On : 10 Jan 2023, 11:14 am

ಅಂಬಾಲ: ಭಾರತ್ ಜೋಡೋ ಯಾತ್ರೆ ಬುಧವಾರ ಪಂಜಾಬ್ ಪ್ರವೇಶಿಸುವ ಮೊದಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಲಿದ್ದಾರೆ.

ಈ ಕುರಿತು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿದ್ದು, '116ನೇ ದಿನ ಪೂರೈಸಿರುವ ಭಾರತ್ ಜೋಡೋ ಯಾತ್ರೆಯು ಅಂಬಾಲಾದಲ್ಲಿ ಹರಿಯಾಣದ ಯಾತ್ರೆಯನ್ನು ಪೂರ್ಣಗೊಳಿಸಿದೆ. ನಾಳೆ ಬೆಳಿಗ್ಗೆ ಪಂಜಾಬ್ ಅನ್ನು ಪ್ರವೇಶಿಸಲಿದೆ. ಯಾತ್ರೆಯನ್ನು ಪ್ರಾರಂಭಿಸುವ ಮುನ್ನ ಪವಿತ್ರ ಗೋಲ್ಡನ್ ಟೆಂಪಲ್‌ಗೆ ತೀರ್ಥಯಾತ್ರೆಗಿಂತ ಉತ್ತಮವಾದ ಮಾರ್ಗವಿಲ್ಲ ಎಂದಿದ್ದಾರೆ.

ಮುಂದುವರಿದು, ಅಮೃತಸರದಲ್ಲಿ ಇಂದು ಮಧ್ಯಾಹ್ನ ಯಾವುದೇ ಪಾದಯಾತ್ರೆ ಇರುವುದಿಲ್ಲ. ಹೀಗಾಗಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಲ್ಲಿ ಗೌರವ ಸಲ್ಲಿಸಬಹುದು ಎಂದು ಹೇಳಿದ್ದಾರೆ.

Advertisement

Advertisement

ಪಂಜಾಬ್ ನಂತರ, ಭಾರತ್ ಜೋಡೋ ಯಾತ್ರೆಯು ಹಿಮಾಚಲ ಪ್ರದೇಶದಲ್ಲಿ ಸ್ವಲ್ಪ ಸಮಯದ ನಂತರ ಸಾಗಿ ಜನವರಿ 20 ರಂದು ಜಮ್ಮು ಮತ್ತು ಕಾಶ್ಮೀರವನ್ನು ಪ್ರವೇಶಿಸಲು ನಿರ್ಧರಿಸಲಾಗಿದೆ.

ಜನವರಿ 30 ರಂದು ಶ್ರೀನಗರದಲ್ಲಿ ತ್ರಿವರ್ಣ ಧ್ವಜಾರೋಹಣದೊಂದಿಗೆ ಯಾತ್ರೆ ಕೊನೆಗೊಳ್ಳಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement