ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 197 ಹೊಸ ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 197 ಹೊಸ ಪ್ರಕರಣ ಪತ್ತೆಯಾಗಿದೆ.

ಸಂಗ್ರಹ ಚಿತ್ರ
Manjula VN
Updated On : 12 Jan 2023, 12:25 pm

ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 197 ಹೊಸ ಪ್ರಕರಣ ಪತ್ತೆಯಾಗಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,80,583ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,723ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,309ಕ್ಕೆ ಇಳಿಕೆಯಾಗಿದೆ.

Advertisement

Advertisement

ಈ ನಡುವೆ ಕಳೆದ 24 ಗಂಟೆಗಳಲ್ಲಿ 229 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,47,551ಕ್ಕೆ ತಲುಪಿದೆ.

ಇದನ್ನೂ ಓದಿ: 2ನೇ ಕೋವಿಡ್ ಬೂಸ್ಟರ್ ಡೋಸ್'ನ ಅಗತ್ಯವಿಲ್ಲ: ಜಯದೇವ ಸಂಸ್ಥೆ ಅಧ್ಯಯನ

ಇನ್ನು ಭಾರತದಲ್ಲಿ ಒಂದೇ 1,89,724 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 91,27,32,756 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.    

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ  2,20,15,76,369 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement