ಸಾಂದರ್ಭಿಕ ಚಿತ್ರ 
ದೇಶ

ಪಾಣಿಪತ್‌: ಅಡುಗೆ ಅನಿಲ ಸಿಲಿಂಡರ್‌ ಸೋರಿಕೆಯಿಂದ ಮನೆಗೆ ಬೆಂಕಿ; ದಂಪತಿ, ನಾಲ್ವರು ಮಕ್ಕಳು ಸಾವು

ಅಡುಗೆ ಅನಿಲದ ಸಿಲಿಂಡರ್ ಸೋರಿಕೆಯಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಪಾಣಿಪತ್‌ನಲ್ಲಿ ಒಂದೇ ಕುಟುಂಬದ ಆರು ಸದಸ್ಯರು ಗುರುವಾರ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಂಡೀಗಢ: ಅಡುಗೆ ಅನಿಲದ ಸಿಲಿಂಡರ್ ಸೋರಿಕೆಯಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಪಾಣಿಪತ್‌ನಲ್ಲಿ ಒಂದೇ ಕುಟುಂಬದ ಆರು ಸದಸ್ಯರು ಗುರುವಾರ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಣಿಪತ್ ಜಿಲ್ಲೆಯ ಬಿಚ್ಪರಿ ಗ್ರಾಮದ ಬಳಿಯ ತಹಸಿಲ್ ಕ್ಯಾಂಪ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೃತರಲ್ಲಿ ದಂಪತಿ ಹಾಗೂ ಅವರ ನಾಲ್ವರು ಮಕ್ಕಳು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ದಂಪತಿ ಮತ್ತು ಅವರ ನಾಲ್ವರು ಮಕ್ಕಳು ಸೇರಿದ್ದಾರೆ ಎಂದು ಪಾಣಿಪತ್‌ನ ತಹಸಿಲ್ ಕ್ಯಾಂಪ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಇನ್ಸ್‌ಪೆಕ್ಟರ್ ಫೂಲ್ ಕುಮಾರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಸಿಲಿಂಡರ್ ಸೋರಿಕೆಯಿಂದ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ನಗರದ ಜನವಸತಿ ಪ್ರದೇಶದಲ್ಲಿ ವಾಸವಿದ್ದ ಕುಟುಂಬ ಪಶ್ಚಿಮ ಬಂಗಾಳದಿಂದ ವಲಸೆ ಬಂದಿತ್ತು. ದಂಪತಿ ಪಾಣಿಪತ್‌ನ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿಸಿದರು.

ಮನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ರಕ್ಷಣಾ ತಂಡ ಪತ್ತೆ ಹಚ್ಚುವಷ್ಟರಲ್ಲಿ ಸಂತ್ರಸ್ತರು ಸುಟ್ಟು ಕರಕಲಾಗಿದ್ದರು.

ಮೃತರನ್ನು ಅಬ್ದುಲ್ (45), ಅವರ 40 ವರ್ಷದ ಪತ್ನಿ, 18 ಮತ್ತು 16 ವರ್ಷದ ಇಬ್ಬರು ಪುತ್ರಿಯರು ಮತ್ತು 12 ಮತ್ತು 10 ವರ್ಷದ ಇಬ್ಬರು ಪುತ್ರರು ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!