ಬಂಧಿತ ಆರೋಪಿಗಳು 
ದೇಶ

ಕಾಂಜಾವಾಲ ಪ್ರಕರಣ: ಅಂದು ರಾತ್ರಿ ಕರ್ತವ್ಯದಲ್ಲಿದ್ದ 11 ಪೊಲೀಸರ ಅಮಾನತು

ಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದು ರಾತ್ರಿ ಪಿಸಿಆರ್ ವ್ಯಾನ್‌ಗಳಲ್ಲಿ ಕರ್ತವ್ಯದಲ್ಲಿದ್ದ 11 ಪೊಲೀಸ್ ಸಿಬ್ಬಂದಿಯನ್ನು ದೆಹಲಿ ಪೊಲೀಸರು...

ನವದೆಹಲಿ: ಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದು ರಾತ್ರಿ ಪಿಸಿಆರ್ ವ್ಯಾನ್‌ಗಳಲ್ಲಿ ಕರ್ತವ್ಯದಲ್ಲಿದ್ದ 11 ಪೊಲೀಸ್ ಸಿಬ್ಬಂದಿಯನ್ನು ದೆಹಲಿ ಪೊಲೀಸರು ಅಮಾನತು ಮಾಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ, ಪ್ರಕರಣದ ಕುರಿತು ದೆಹಲಿ ಪೊಲೀಸರ ನೀಡಿದ ವಿವರವಾದ ವರದಿಯನ್ನು ಆಧರಿಸಿ ಅಂದು ಮೂರು ಪಿಸಿಆರ್ ವ್ಯಾನ್‌ಗಳಲ್ಲಿ ಮತ್ತು ಎರಡು ಪೊಲೀಸ್ ಪಿಕೆಟ್‌ಗಳಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡುವಂತೆ ಕೇಂದ್ರ ಗೃಹ ಸಚಿವಾಲಯ ಶಿಫಾರಸು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿ 1 ರಂದು ರಾತ್ರಿ ಅಂಜಲಿ ಸಿಂಗ್ ಎಂಬ ಯುವತಿ ಚಾಲನೆ ಮಾಡುತ್ತಿದ್ದ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದಿತ್ತು. ಕಾರಿನಡಿ ಸಿಕ್ಕಿ 20 ವರ್ಷದ ಅಂಜಲಿ ಸಿಂಗ್ ಅವರನ್ನು ಆರೋಪಿಗಳು 12 ಕಿ.ಮೀ.ವರೆಗೆ ಎಳೆದೊಯ್ದಿದ್ದರು. ಪರಿಣಾಮ ಯುವತಿ ದೇಹದ ಮೇಲೆ 40 ಗಾಯಗಳಾಗಿತ್ತು ಎಂದು ಮರಣೋತ್ತರ ಪರೀಕ್ಷೆಯ ವರದಿ ಹೇಳಿದೆ.

ಅಪಘಾತದ ತೀವ್ರತೆಗೆ ಆಕೆಯ ಮೆದುಳೇ ಕಾಣೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ತೋರಿದ ರೋಹಿಣಿ ಜಿಲ್ಲೆಯ ಒಟ್ಟು 11 ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?