ಸಿಬಿಐ 
ದೇಶ

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕಚೇರಿಯಲ್ಲಿ ಸಿಬಿಐ ಶೋಧ

ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಶನಿವಾರ ದೆಹಲಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ಕಚೇರಿಯಲ್ಲಿ ತೀವ್ರ ಶೋಧ ನಡೆಸಿದೆ.

ನವದೆಹಲಿ: ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಶನಿವಾರ ದೆಹಲಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ಕಚೇರಿಯಲ್ಲಿ ತೀವ್ರ ಶೋಧ ನಡೆಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಸಿಸೋಡಿಯಾ ಅವರು, ಈ ಹಿಂದೆ ನಡೆದ ಸಿಬಿಐ ದಾಳಿಗಳಲ್ಲಿ ತಮ್ಮ ವಿರುದ್ಧ ಏನನ್ನೂ ಕಂಡುಹಿಡಿಯಲಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲದ ಕಾರಣ ಈ ಬಾರಿಯೂ ಅವರಿಗೆ ಏನೂ ಸಿಗುವುದಿಲ್ಲ ಎಂದು ಹೇಳಿದ್ದಾರೆ.

ದೆಹಲಿ ಸಚಿವಾಲಯದ ಸಿಸೋಡಿಯಾ ಅವರ ಕಚೇರಿಯಲ್ಲಿ ಸಿಬಿಐ ತಂಡ ಶೋಧ ನಡೆಸುತ್ತಿದೆ ಎಂದು ದೆಹಲಿ ಸರ್ಕಾರದ ಮೂಲಗಳು ತಿಳಿಸಿವೆ.

"ಸಿಬಿಐ ಇಂದು ಮತ್ತೆ ನನ್ನ ಕಚೇರಿಯನ್ನು ತಲುಪಿದೆ. ಅವರಿಗೆ ಸ್ವಾಗತ. ಅವರು ನನ್ನ ಮನೆ ಮೇಲೆ ದಾಳಿ ನಡೆಸಿದರು. ಲಾಕರ್ ಅನ್ನು ಶೋಧಿಸಿದರು. ನನ್ನ ಗ್ರಾಮದಲ್ಲಿ ನನ್ನ ವಿರುದ್ಧ ವಿಚಾರಣೆ ನಡೆಸಿದರು. ಆಗಲೂ ಅವರಿಗೆ ಏನೂ ಸಿಕ್ಕಿಲ್ಲ ಮತ್ತು ಈಗಲೂ ಏನೂ ಸಿಗುವುದಿಲ್ಲ ಏಕೆಂದರೆ ನಾನು ಯಾವುದೇ ತಪ್ಪು ಮಾಡಿಲ್ಲ. ದೆಹಲಿಯ ಮಕ್ಕಳ ಶಿಕ್ಷಣಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ,'' ಎಂದು ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!