ರಾಹುಲ್ ಗಾಂಧಿ ಮತ್ತು ಸಂತೋಖ್ ಸಿಂಗ್ ಚೌಧರಿ 
ದೇಶ

ರಾಹುಲ್ ಗಾಂಧಿ ಜೊತೆ ಭಾರತ್​ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದ ವೇಳೆ ಸಂಸದ ಸಂತೋಖ್ ಸಿಂಗ್ ಹೃದಯಾಘಾತದಿಂದ ಸಾವು!

ಭಾರತ್​ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಜಲಂಧರ್ ಕಾಂಗ್ರೆಸ್ ಸಂಸದ ಸಂತೋಖ್​​​​​ ಸಿಂಗ್(77)​ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾರತ್​ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾಗ ಹೃದಯಾಘಾತವಾಗಿ ಸಂತೋಖ್​ ಸಿಂಗ್ ಅಸ್ವಸ್ಥರಾಗಿದ್ದರು.

ಭಾರತ್​ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಜಲಂಧರ್ ಕಾಂಗ್ರೆಸ್ ಸಂಸದ ಸಂತೋಖ್​​​​​ ಸಿಂಗ್(77)​ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾರತ್​ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾಗ ಹೃದಯಾಘಾತವಾಗಿ ಸಂತೋಖ್​ ಸಿಂಗ್ ಅಸ್ವಸ್ಥರಾಗಿದ್ದರು.

ಈ ವೇಳೆ ಅವರನ್ನು​ ಲೂದಿಯಾನದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಸಂಸದ ಸಂತೋಖ್​​​​​​​ ಸಿಂಗ್ ಚೌಧರಿ ಸಾವನ್ನಪ್ಪಿದ್ದಾರೆ. ಪಂಜಾಬ್​ನ ಲೂದಿಯಾನದಲ್ಲಿ ನಡೆಯುತ್ತಿದ್ದ ಯಾತ್ರೆ ವೇಳೆ ಘಟನೆ ನಡೆದಿದ್ದು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಂತೋಖ್​​​​​ ಸಿಂಗ್​ ನಿಧನಕ್ಕೆ ರಾಹುಲ್​ ಗಾಂಧಿ,ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್​ ಸಂತಾಪ ಸೂಚಿಸಿದ್ದಾರೆ.

ಜಲಂಧರ್ ಜಿಲ್ಲೆಯ ಫಿಲ್ಲೌರ್ ಪ್ರದೇಶದ ಮೂಲಕ ಯಾತ್ರೆ ಸಾಗುತ್ತಿದ್ದಾಗ ದುರಂತ ಸಂಭವಿಸಿದೆ. ಫಿಲೌರ್ ವಿಧಾನಸಭಾ ಕ್ಷೇತ್ರವನ್ನು ಸಂತೋಖ್ ಸಿಂಗ್ ಚೌಧರಿ ಅವರ ಪುತ್ರ ವಿಕ್ರಮಜಿತ್ ಚೌಧರಿ ಪ್ರತಿನಿಧಿಸುತ್ತಿದ್ದಾರೆ. 2014 ಮತ್ತು 2019ರಲ್ಲಿ ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಸಂತೋಷ್ ಸಿಂಗ್ ಗೆದ್ದಿದ್ದರು.

ಸಂಸದ ಸಂತೋಖ್ ಸಿಂಗ್ ರಾಹುಲ್ ಗಾಂಧಿ ಅವರೊಂದಿಗೆ ಕುಶ್ತ್ ಆಶ್ರಮದಿಂದ ಹೊರಬಂದಾಗ ಕುಸಿದು ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ತಕ್ಷಣ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ವಿರ್ಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಭಾರತ್ ಜೋಡೋ ಯಾತ್ರೆ ಸದ್ಯ ಸ್ಥಗಿತಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು