ದೇಶ

ಕಾಳಿ ಪೋಸ್ಟರ್ ವಿವಾದ: ಎಫ್‌ಐಆರ್ ರದ್ದು ಕೋರಿ ಸುಪ್ರೀಂ ಮೊರೆ ಹೋದ ನಿರ್ದೇಶಕಿ ಲೀನಾ

Lingaraj Badiger

ನವದೆಹಲಿ: ಸಾಕ್ಷ್ಯಚಿತ್ರದ ಪೋಸ್ಟರ್‌ನಲ್ಲಿ ಕಾಳಿ ದೇವತೆ ಕೈಯಲ್ಲಿ ಸಿಗರೇಟ್ ಇರುವುದನ್ನು ವಿರೋಧಿಸಿ ತಮ್ಮ  ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಚಲನಚಿತ್ರ ನಿರ್ದೇಶಕಿ ಲೀನಾ ಮಣಿಮೇಕಲೈ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮಣಿಮೇಕಲೈ ಸ್ವತಃ ಕಾಳಿ ದೇವಿಯ ವೇಷ ಧರಿಸಿ ಹೆಮ್ಮೆಯ ಬಾವುಟ ಹಿಡಿದು ಸಿಗರೇಟ್ ಸೇದುತ್ತಿರುವ ಪೋಸ್ಟರ್‌ ವಿರುದ್ಧ ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಉತ್ತರಾಖಂಡದಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳನ್ನು ಕ್ಲಬ್ ಮಾಡಿ ರದ್ದುಗೊಳಿಸುವಂತೆ ನಿರ್ದೇಶಕಿ ಮನವಿ ಮಾಡಿದ್ದಾರೆ.

ಈ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠದ ಮುಂದೆ ಉಲ್ಲೇಖಿಸಲಾಗಿದೆ.

ಮಣಿಮೇಕಲೈ ಅವರ ಅರ್ಜಿಯನ್ನು ಜನವರಿ 20 ರಂದು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಪೀಠ ಹೇಳಿದೆ.

ತಾವು ಒಬ್ಬ ಸೃಜನಶೀಲ ಚಲನಚಿತ್ರ ನಿರ್ದೇಶಕಿಯಾಗಿದ್ದು, ಯಾರೊಬ್ಬರ ಧಾರ್ಮಿಕ ಭಾವನೆಗೆ ಧಕ್ಕೆ ತರುವು ಉದ್ದೇಶವನ್ನು ಈ ಚಿತ್ರದ ಪೋಸ್ಟರ್ ಹೊಂದಿಲ್ಲ ಎಂದು ಮಣಿಮೇಕಲೈ ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

SCROLL FOR NEXT