ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 179 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

Ramyashree GN

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 179 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,227 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಈ ಮೂಲಕ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 4,46,80,936ಕ್ಕೆ ಏರಿಕೆಯಾಗಿದ್ದು, ಈವರೆಗೆ 5,30,726 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ 0.10ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19ರಷ್ಟಿದೆ.

ಸದ್ಯ ಈವರೆಗೆ 4,41,47,983 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ವಾರದ ಪಾಸಿಟಿವಿಟಿ ದರ ಶೇ 0.10ರಷ್ಟಿದೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.16 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

SCROLL FOR NEXT