ದೇಶ

ಬಿಜೆಪಿ ನಾಯಕಿ ದೂರಿನ ಹಿನ್ನೆಲೆ, ಉರ್ಫಿ ಜಾವೇದ್ ಹೇಳಿಕೆ ದಾಖಲಿಸಿಕೊಂಡ ಪೊಲೀಸರು

Nagaraja AB

ಮುಂಬೈ: ಬಿಜೆಪಿ ನಾಯಕಿ ಚಿತ್ರಾ ವಾಘ್ ನೀಡಿದ ದೂರಿಗೆ ಸಂಬಂಧಿಸಿದಂತೆ ಮಾಡೆಲ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅತ್ಯಂತ ಹೆಚ್ಚಿನ ಫಾಲೋವರ್ಸ್ ಹೊಂದಿರುವ ಉರ್ಫಿ ಜಾವೇದ್ ಅವರ ಹೇಳಿಕೆಯನ್ನು ಪೊಲೀಸರು ಶನಿವಾರ ದಾಖಲಿಸಿಕೊಂಡಿದ್ದಾರೆ.

 ಪೊಲೀಸರು ಆಕೆಯನ್ನು ವಿಚಾರಣೆಗೆ ಕರೆದ ನಂತರ  ಹೇಳಿಕೆ ದಾಖಲಿಸಲು ಜಾವೇದ್ ಅಂಬೋಲಿ ಪೊಲೀಸ್ ಠಾಣೆಗೆ ಭೇಟಿ ನೀಡಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಅಸಹ್ಯಕರವಾಗಿ  ಡ್ರೆಸ್ಸಿಂಗ್ ಮಾಡಿಕೊಂಡಿದ್ದಕ್ಕಾಗಿ ಉರ್ಫಿ ಜಾವೇದ್ ವಿರುದ್ಧ ಮಹಾರಾಷ್ಟ್ರ ಬಿಜೆಪಿ ಮಹಿಳಾ ವಿಭಾಗದ ಮುಖ್ಯಸ್ಥೆ ವಾಘ್ ದೂರು ದಾಖಲಿಸಿದ್ದಾರೆ. ವಾಘ್ ಅವರ ದೂರಿನ ಮೇಲೆ ಇನ್ನೂ ಯಾವುದೇ ಪ್ರಥಮ ಮಾಹಿತಿ ವರದಿ ದಾಖಲಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

SCROLL FOR NEXT