ದೇಶ

ಚುನಾವಣೆಯಿಂದ ಹಿಂದೆ ಸರಿದ ಮಹಾ ಎಂಎಲ್‌ಸಿ ಸುಧೀರ್ ತಂಬೆಯನ್ನು ಅಮಾನತುಗೊಳಿಸಿದ ಕಾಂಗ್ರೆಸ್

Lingaraj Badiger

ಮುಂಬೈ: ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಹೆಸರಿಸಲಾಗಿದ್ದರೂ ವಿಧಾನ ಪರಿಷತ್ ಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿದ ಕೆಲವು ದಿನಗಳ ನಂತರ ಕಾಂಗ್ರೆಸ್, ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯ ಸುಧೀರ್ ತಂಬೆಯನ್ನು ಭಾನುವಾರ ಪಕ್ಷದಿಂದ ಅಮಾನತುಗೊಳಿಸಿದೆ ಮತ್ತು ಪ್ರಸ್ತುತ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರದಿಂದ ಅವರ ಮಗ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿದೆ.

ಶಿಸ್ತು ಕ್ರಮ ಸಮಿತಿಯ ಸದಸ್ಯ, ಎಐಸಿಸಿ ಕಾರ್ಯದರ್ಶಿ ತಾರಿಖ್ ಅನ್ವರ್ ಅವರು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯೊಂದಿಗೆ ಸಮಿತಿಯು ತಂಬೆ ಅವರನ್ನು ಪಕ್ಷದಿಂದ ಅಮಾನತುಗೊಳಿಸಲು ನಿರ್ಧರಿಸಲಾಗಿದೆ ಮತ್ತು ಅವರ ವಿರುದ್ಧ ವಿಚಾರಣೆ ಬಾಕಿ ಇದೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಗೆ ಮುನ್ನ ಕಾಂಗ್ರೆಸ್‌ಗೆ ಮುಜುಗರ ಉಂಟುಮಾಡಿದ ತಂಬೆ ಗುರುವಾರ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು ಮತ್ತು ಅವರು ಪ್ರತಿನಿಧಿಸುವ ಕ್ಷೇತ್ರದಿಂದ ತಮ್ಮ ಪುತ್ರ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದರು.

ಮಹಾರಾಷ್ಟ್ರ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಜನವರಿ 30ರಂದು ಚುನಾವಣೆ ನಡೆಯಲಿದ್ದು, ಗುರುವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು.

SCROLL FOR NEXT