ದೇಶ

ವಿರಾಟ್ ಕೊಹ್ಲಿ, ಎಂಎಸ್ ಧೋನಿ, ರೋಹಿತ್ ಶರ್ಮಾ ಪುತ್ರಿಯರ ವಿರುದ್ಧ ಆಕ್ಷೇಪಾರ್ಹ ಕಮೆಂಟ್‌; ಎಫ್‌ಐಆರ್ ದಾಖಲು

Ramyashree GN

ನವದೆಹಲಿ: ದೆಹಲಿ ಮಹಿಳಾ ಆಯೋಗ ನೋಟಿಸ್ ಕಳುಹಿಸಿದ ನಂತರ, ಕ್ರಿಕೆಟಿಗರಾದ ಎಂಎಸ್ ಧೋನಿ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಪುತ್ರಿಯರ ಮೇಲೆ ಸಾಮಾಜಿಕ ಮಾಧ್ಯಮದ ಕಾಮೆಂಟ್‌ಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕ್ರಿಕೆಟಿಗರ ಪುತ್ರಿಯರ ಮೇಲೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಿದ ಆಕ್ಷೇಪಾರ್ಹ ಕಾಮೆಂಟ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ (ಡಿಸಿಡಬ್ಲ್ಯು) ಸ್ವಾತಿ ಮಲಿವಾಲ್ ಅವರು ದೆಹಲಿ ಪೊಲೀಸರಿಗೆ ನೋಟಿಸ್ ಕಳುಹಿಸಿದ್ದರು. ಬಳಿಕ ದೆಹಲಿ ಪೊಲೀಸ್‌ನ ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (ಐಎಫ್‌ಎಸ್‌ಒ) ಘಟಕವು ಎಫ್‌ಐಆರ್ ದಾಖಲಿಸಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಟ್ವಿಟರ್‌ನೊಂದಿಗೆ ಕೆಲಸ ಮಾಡಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್ ಟ್ವೀಟ್ ಮಾಡಿದ್ದು, 'ನನ್ನ ಸೂಚನೆಯ ನಂತರ, ದೆಹಲಿ ಪೊಲೀಸರು ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಅವರ ಪುತ್ರಿಯರ ಮೇಲೆ ಆಕ್ಷೇಪಾರ್ಹ ಕಮೆಂಟ್‌ಗಳನ್ನು ಮಾಡಿದ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಶೀಘ್ರದಲ್ಲೇ ಎಲ್ಲಾ ಅಪರಾಧಿಗಳನ್ನು ಬಂಧಿಸಲಾಗುವುದು ಮತ್ತು ಕಂಬಿಗಳ ಹಿಂದೆ ಕಳುಹಿಸಲಾಗುವುದು' ಎಂದಿದ್ದಾರೆ.

ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

SCROLL FOR NEXT