ದೇಶ

ಲೆಫ್ಟಿನೆಂಟ್ ಗವರ್ನರ್ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವಂತಿಲ್ಲ, ಆದರೆ ಅವರು ಅದನ್ನೇ ಮಾಡುತ್ತಿದ್ದಾರೆ: ಅರವಿಂದ್ ಕೇಜ್ರಿವಾಲ್

Shilpa D

ನವದೆಹಲಿ: ಎಎಪಿ ಸರ್ಕಾರದ  ಕಾರ್ಯಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿರುವ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿರುದ್ಧ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನೇತೃತ್ವದಲ್ಲಿ, ಎಎಪಿ ಶಾಸಕರು ಸೋಮವಾರ ಲೆಫ್ಟಿನೆಂಟ್ ಗವರ್ನರ್ ಕಚೇರಿಗೆ ಮೆರವಣಿಗೆ ನಡೆಸಿ ಪ್ರತಿಭಟಿಸಿದರು.

ದೆಹಲಿ ವಿಧಾನಸಭೆಯನ್ನು ದಿನದ ಮಟ್ಟಿಗೆ ಮುಂದೂಡಿದ ನಂತರ ಮೆರವಣಿಗೆ ಪ್ರಾರಂಭವಾಯಿತು. ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಶಾಸಕರು ಎಲ್‌ಜಿ ಕಚೇರಿಗೆ ಮೆರವಣಿಗೆ ನಡೆಸಬೇಕಾಗಿರುವುದು ದುರದೃಷ್ಟಕರ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಆದರೆ ಅವರು ಅದನ್ನು ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

"ಕಾನೂನುಬಾಹಿರ ಮತ್ತು ಅನಗತ್ಯ ಅಡೆತಡೆಗಳು ಮತ್ತು ಹಸ್ತಕ್ಷೇಪಗಳ" ಕುರಿತು ಬಿಜೆಪಿ ಶಾಸಕರು ಮತ್ತು ಆಡಳಿತಾರೂಢ ಎಎಪಿ ಸದಸ್ಯರ ನಡುವೆ ಮಾತಿನ ಸಮರ ನಡೆದ ನಂತರ ವಿಧಾನಸಭೆ ಕಲಾಪವನ್ನು ಮುಂದೂಡಲಾಯಿತು. ದೆಹಲಿ ಸರ್ಕಾರಿ ಶಿಕ್ಷಕರನ್ನು ಫಿನ್‌ಲ್ಯಾಂಡ್‌ಗೆ ತರಬೇತಿ ಕಾರ್ಯಕ್ರಮಕ್ಕೆ ಕಳುಹಿಸಲು ಲೆಫ್ಟಿನೆಂಟ್ ಗವರ್ನರ್ ಆಕ್ಷೇಪಣೆ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ ಎಎಪಿ ಶಾಸಕರು ಪ್ರತಿಭಟಿಸಿದರು.

SCROLL FOR NEXT