ದೇಶ

ಜಲ್ಲಿಕಟ್ಟು ಸ್ಪರ್ಧೆ: ತಮಿಳುನಾಡಿನಲ್ಲಿ ಇಬ್ಬರು ಸಾವು; ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್

Lingaraj Badiger

ಮಧುರೈ: ತಮಿಳುನಾಡಿನಲ್ಲಿ ಪೊಂಗಲ್ ಹಬ್ಬದ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಎರಡು ಪ್ರತ್ಯೇಕ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಗೂಳಿ ಪಳಗಿಸುವ ವ್ಯಕ್ತಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. 

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಈ ಇಬ್ಬರ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದು, ಗೂಳಿ ದಾಳಿಯಿಂದ ಸಾವನ್ನಪ್ಪಿದ ಪಾಲಮೇಡುವಿನ ಗೂಳಿ ಪಳಗಿಸುವ ಅರವಿಂದ್ ರಾಜ್ ಮತ್ತು ಪುದುಕೊಟ್ಟೈ ಜಿಲ್ಲೆಯ ವೀಕ್ಷಕ ಎಂ ಅರವಿಂದ್ ಅವರ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಮೃತರ ಕುಟುಂಬಗಳಿಗೆ ಮತ್ತು ಸ್ನೇಹಿತರಿಗೆ ತೀವ್ರ ಸಂತಾಪ ಸೂಚಿಸುತ್ತೇನೆ. ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಸಾರ್ವಜನಿಕ ಪರಿಹಾರ ನಿಧಿಯಿಂದ ತಲಾ 3 ಲಕ್ಷ ರೂ.ಗಳನ್ನು ನೀಡುವಂತೆ ಆದೇಶಿಸಿದ್ದೇನೆ ಎಂದು ಸಿಎಂ ಸ್ಟಾಲಿನ್ ತಿಳಿಸಿದ್ದಾರೆ.

ಜಿಲ್ಲೆಯ ಅವನಿಯಪುರಂನಲ್ಲಿ ನಡೆದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಪಳಗಿಸುವವರು ಮತ್ತು ಮಾಲೀಕರು ಸೇರಿದಂತೆ ಕನಿಷ್ಠ 75 ಜನ ಗಾಯಗೊಂಡಿದ್ದಾರೆ ಮತ್ತು ಪಾಲಮೇಡುವಿನಲ್ಲಿ ಇಂದು ಸಂಜೆ ಮುಕ್ತಾಯಗೊಂಡ ಕಾರ್ಯಕ್ರಮದಲ್ಲಿ 34 ಮಂದಿ ಗಾಯಗೊಂಡಿದ್ದಾರೆ.

ಪಾಲಮೇಡುವಿನಲ್ಲಿ ನಡೆದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ 9 ಹೋರಿಗಳನ್ನು ತಡೆದು ಐದನೇ ಸುತ್ತಿನಲ್ಲಿ ಮುಂಚೂಣಿಯಲ್ಲಿದ್ದ 26 ವರ್ಷದ ಯುವಕ ಅರವಿಂದ್ ರಾಜ್ ಅವರು ಗೂಳಿ ತಿವಿದು ಮೃತಪಟ್ಟಿದ್ದಾರೆ.

SCROLL FOR NEXT