ಕುಲದೀಪ್ ಸಿಂಗ್ ಸೆಂಗಾರ್‌ 
ದೇಶ

ಉನ್ನಾವೋ ಅತ್ಯಾಚಾರ ಪ್ರಕರಣದ ದೋಷಿ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ಮಧ್ಯಂತರ ಜಾಮೀನು!

2017ರ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. 

ನವದೆಹಲಿ: 2017ರ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. 

ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ದೆಹಲಿ ಕೋರ್ಟ್ ನಿಂದ ಸೋಮವಾರ ಮಧ್ಯಂತರ ಜಾಮೀನು ಸಿಕ್ಕಿದೆ. ಮಗಳ ಮದುವೆಯಲ್ಲಿ ಪಾಲ್ಗೊಳ್ಳಲು ತಂದೆಗೆ ಜಾಮೀನು ನೀಡುವಂತೆ ಸೆಂಗಾರ್ ಪುತ್ರಿ ಮನವಿ ಮೇರೆಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯವು ಕುಲದೀಪ್ ಸಿಂಗ್ ಸೆಂಗಾರ್ ಗೆ ಜನವರಿ 27ರಿಂದ ಫೆಬ್ರವರಿ 10ರವರೆಗೆ ಮಧ್ಯಂತರ ಜಾಮೀನು ನೀಡಿದೆ.

ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿ ಮತ್ತು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕುಲದೀಪ್ ಸಿಂಗ್ ಸೆಂಗಾರ್ ಅವರ ಮಗಳ ಮದುವೆ ಫೆಬ್ರವರಿಯಲ್ಲಿ ನಡೆಯಲಿದೆ. ಜ.18ರಿಂದ ಮಾಜಿ ಶಾಸಕರ ಮಗಳ ಮದುವೆ ಕಾರ್ಯಕ್ರಮ ಆರಂಭವಾಗಲಿದ್ದು ಫೆಬ್ರವರಿ 8ರಂದು ವಿವಾಹ ನಡೆಯಲಿದೆ. 

ಇನ್ನು 2019ರಲ್ಲಿ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಕಾರಿನಲ್ಲಿ ರಾಯ್ ಬರೇಲಿಗೆ ಹೋಗುತ್ತಿದ್ದಾಗ ಆಕೆಯ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿತ್ತು. ಇದಾದ ನಂತರ 2019ರ ಆಗಸ್ಟ್ 1ರಂದು ಸುಪ್ರೀಂ ಕೋರ್ಟ್ ಪ್ರಕರಣವನ್ನು ಉತ್ತರ ಪ್ರದೇಶದ ಕೆಳ ನ್ಯಾಯಾಲಯದಿಂದ ದೆಹಲಿಗೆ ವರ್ಗಾಯಿಸಿತು. ಕುಲದೀಪ್ ಸಿಂಗ್ ಸೆಂಗಾರ್ ಸದ್ಯ ದೆಹಲಿಯ ತಿಹಾರ್ ಜೈಲಿನಲ್ಲಿದ್ದು, ಜೀವಾವಧಿ ಶಿಕ್ಷೆಯ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ