ಇಂಡಿಗೋ ವಿಮಾನ ಮತ್ತು ತೇಜಸ್ವಿ ಸೂರ್ಯ 
ದೇಶ

ಇಂಡಿಗೋ ವಿಮಾನ ಟೇಕಾಫ್ ವೇಳೆ 'ಎಮರ್ಜೆನ್ಸಿ ಡೋರ್' ತೆಗೆದ ಸಂಸದ ತೇಜಸ್ವಿ ಸೂರ್ಯ?, ತನಿಖೆಗೆ ಡಿಜಿಸಿಎ ಆದೇಶ

ಟೇಕಾಫ್ ವೇಳೆ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿಮಾನದ 'ಎಮರ್ಜೆನ್ಸಿ ಡೋರ್' ತೆಗೆದಿದ್ದರು ಎನ್ನಲಾಗಿದೆ.

ನವದೆಹಲಿ: ಟೇಕಾಫ್ ವೇಳೆ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿಮಾನದ 'ಎಮರ್ಜೆನ್ಸಿ ಡೋರ್' ತೆಗೆದಿದ್ದರು ಎನ್ನಲಾಗಿದೆ.

ಇಂಡಿಗೋ ಏರ್‌ಲೈನ್ಸ್ ಮಂಗಳವಾರ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಒಂದು ತಿಂಗಳ ಹಿಂದೆ ಚೆನ್ನೈನಿಂದ ತಿರುಚಿರಾಪಳ್ಳಿಗೆ ಪ್ರಯಾಣಿಕನೊಬ್ಬ ಇಂಡಿಗೋ ಫ್ಲೈಟ್ 6E 7339 ರಲ್ಲಿ ATR ವಿಮಾನದ ತುರ್ತು ನಿರ್ಗಮನ ದ್ವಾರವನ್ನು ಆಕಸ್ಮಿಕವಾಗಿ ಅನ್ಲಾಕ್ ಮಾಡಿದ್ದರು ಎನ್ನಲಾಗಿದೆ. 

ತುರ್ತು ನಿರ್ಗಮನ ದ್ವಾರವನ್ನು ಅನ್ಲಾಕ್ ಮಾಡಿದ ಪ್ರಯಾಣಿಕ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಡಿಜಿಸಿಎ ಅಥವಾ ಇಂಡಿಗೋ ವಿಮಾನ ಸಂಸ್ಥೆ ಯಾವುದೇ ಸ್ಪಷ್ಟನೆ ನೀಡಿಲ್ಲ. 

ವಿಮಾನಯಾನ ಸಂಸ್ಥೆಯು ಪ್ರಯಾಣಿಕರ ಗುರುತು ಅಥವಾ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸಬೇಕಾಗಿಲ್ಲದ ಕಾರಣ ಪತ್ರಿಕಾ ಹೇಳಿಕೆಯು ಸಂಸದರನ್ನು ಹೆಸರಿಸದಿದ್ದರೂ, ಪ್ರಯಾಣಿಕರು ತಮ್ಮ ಕ್ರಮಕ್ಕಾಗಿ ಕ್ಷಮೆಯಾಚಿಸಿದ್ದಾರೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ಪ್ರಕಾರ, ಘಟನೆಯನ್ನು ವರದಿ ಮಾಡಲಾಗಿದೆ ಮತ್ತು ಘಟನೆ ಬಳಿಕ ವಿಮಾನವನ್ನು ಕಡ್ಡಾಯವಾಗಿ ಇಂಜಿನಿಯರಿಂಗ್ ತಪಾಸಣೆಗೆ ಒಳಪಡಿಸಲಾಯಿತು.. ಬಳಿಕ ಸುರಕ್ಷತೆ ಕುರಿತು ತಜ್ಞರು ವರದಿ ನೀಡಿದ ಬಳಿಕವೇ ವಿಮಾನ ಪ್ರಯಾಣಕ್ಕೆ ಅನುವು ಮಾಡಿಕೊಡಲಾಯಿತು. ಇದು ವಿಮಾನದ ವಿಳಂಬಕ್ಕೆ ಕಾರಣವಾಯಿತು ಎಂದು ಹೇಳಲಾಗಿದೆ. 

ಚೆನ್ನೈನಿಂದ ತಿರುಚ್ಚಿಗೆ ಹಾರುತ್ತಿದ್ದ ATR 72-600 ವಿಮಾನವು ಬೆಳಿಗ್ಗೆ 10.05 ಕ್ಕೆ ಟೇಕ್ ಆಫ್ ಆಗಬೇಕಿತ್ತು ಆದರೆ ಎರಡು ಗಂಟೆಗಳಿಗೂ ಹೆಚ್ಚು ವಿಳಂಬವಾಯಿತು.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ  ಡಿಜಿಸಿಎ ತನಿಖೆಗೆ ಆದೇಶಿಸಿದ್ದು, ಅಲ್ಲದೆ ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಡಿಜಿಸಿಎ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT