ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ಭಾರತದಲ್ಲಿ 24 ಗಂಟೆಗಳಲ್ಲಿ 134 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 134 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,962ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 134 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,962ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಈ ಮೂಲಕ ಒಟ್ಟು 4.46 ಕೋಟಿಗೂ ಅಧಿಕ ಮಂದಿಗೆ ಸೋಂಕು ತಗುಲಿದೆ. ಇದೇ ವೇಳೆ ಈವರೆಗೆ ಸಾವಿಗೀಡಾದವರ ಸಂಖ್ಯೆ 5,30,728 ತಲುಪಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 0.07ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 0.08ರಷ್ಟಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಈವರೆಗೆ ದೇಶದಲ್ಲಿ 4,41,48,815 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೂ 220.20 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!