ದೇಶ

ನ್ಯಾಯಾಧೀಶರಾಗಿ ಸಲಿಂಗಕಾಮಿ ಸೌರಭ್ ಕಿರ್ಪಾಲ್ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಮತ್ತೆ ಬೆಂಬಲ

Lingaraj Badiger

ನವದೆಹಲಿ: ಬಹಿರಂಗವಾಗಿ ತಾನು ಸಲಿಂಗಕಾಮಿ ಎಂದು ಹೇಳಿಕೊಂಡಿರುವ ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸುವ ತನ್ನ ನವೆಂಬರ್ 11, 2021 ರ ಶಿಫಾರಸನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಪುನರುಚ್ಚರಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಕೊಲಿಜಿಯಂ, ಕಿರ್ಪಾಲ್ ಅವರನ್ನು ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡುವ ಪ್ರಸ್ತಾವನೆಯು ಕಳೆದ ಐದು ವರ್ಷಗಳಿಂದ ಬಾಕಿ ಉಳಿದಿದೆ. ಈ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸಬೇಕಾಗಿದೆ ಎಂದು ಹೇಳಿದ್ದಾರೆ.

ಕಿರ್ಪಾಲ್ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ ಎನ್ ಕಿರ್ಪಾಲ್ ಅವರ ಪುತ್ರರಾಗಿದ್ದು, 2017 ರಿಂದ ಅವರ ನೇಮಕಾತಿಯನ್ನು ಸ್ಥಗಿತಗೊಳಿಸಲಾಗಿದೆ.

ಕಿರ್ಪಾಲ್ ಅವರ ವಿರುದ್ಧದ ಆಕ್ಷೇಪಣೆಗಳನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ನಂತರ, ಇದೀಗ ದೆಹಲಿ ಹೈಕೋರ್ಟ್‌ ನ್ಯಾಯಾಧೀಶರಾಗಿ ನೇಮಕ ಮಾಡಲು ಕೇಂದ್ರ ಸರ್ಕಾರಕ್ಕೆ ಅವರ ಹೆಸರನ್ನು ಮತ್ತೆ ಶಿಫಾರಸು ಮಾಡಲು ಕೊಲಿಜಿಯಂ ನಿರ್ಧರಿಸಿದೆ.

ದೆಹಲಿ ಹೈಕೋರ್ಟ್ ಕೊಲಿಜಿಯಂ 2017 ರಲ್ಲಿ ಕಿರ್ಪಾಲ್ ಅವರನ್ನು ನ್ಯಾಯಾಧೀಶರನ್ನಾಗಿ ನೇಮಿಸುವಂತೆ ಶಿಫಾರಸು ಮಾಡಿತ್ತು. ತರುವಾಯ, ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರ ಹೆಸರನ್ನು ನಾಲ್ಕು ಬಾರಿ ಶಿಫಾರಸು ಮಾಡಿದೆ. ಆದರೆ ಎಲ್ಲಾ ಸಂದರ್ಭಗಳಲ್ಲಿ ಅವರ ನೇಮಕಾತಿಯನ್ನು ಮುಂದೂಡಲಾಗಿದೆ.

SCROLL FOR NEXT