ದೇಶ

ಕಳಸಾ-ಬಂಡೂರಿ ವಿಸ್ತೃತ ಯೋಜನೆ ವಿರೋಧಿಸಿ ಗೋವಾ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

Lingaraj Badiger

ಪಣಜಿ: ಕಳಸಾ - ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿ(ಡಿಪಿಆರ್)ಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿರುವುದನ್ನು ವಿರೋಧಿಸಿ ಗೋವಾ ಬಿಜೆಪಿ ಸರ್ಕಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ.

ಗೋವಾ ವಿಧಾನಸಭೆಯಲ್ಲಿ ಗುರುವಾರ ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುದೀರ್ಘ ಆರು ಗಂಟೆಗಳ ಚರ್ಚೆಯ ನಂತರ ತಡರಾತ್ರಿ ನಿರ್ಣಯ ಅಂಗೀಕರಿಸಲಾಯಿತು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಯೂರಿ ಅಲೆಮಾವೊ ಅವರು, ಅಂತರರಾಜ್ಯ ನದಿ ನೀರು ಹಂಚಿಕೆ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರೆ, ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಮಹದಾಯಿ ಜಲ ವಿವಾದ ನ್ಯಾಯಾಧಿಕರಣದ ತೀರ್ಪನ್ನು ನ್ಯಾಯಯುತವಾಗಿ ಜಾರಿಗೆ ತರಲು ಕೇಂದ್ರ ಸರ್ಕಾರ ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸಬೇಕೆಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರವು ಮಹದಾಯಿ ಸಮಸ್ಯೆಯನ್ನು ಅಸ್ತ್ರಗೊಳಿಸಿದೆ ಮತ್ತು ಈಗ ಅದನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ’ ಎಂದು ಅಲೆಮಾವೊ ಹೇಳಿದರು.

SCROLL FOR NEXT