ನಿರ್ದೇಶಕಿ ಲೀನಾ 
ದೇಶ

ಕಾಳಿ ಪೋಸ್ಟರ್ ವಿವಾದ: ನಿರ್ದೇಶಕಿ ಲೀನಾಗೆ ಸುಪ್ರೀಂ ಕೋರ್ಟ್ ರಕ್ಷಣೆ

ಸಾಕ್ಷ್ಯಚಿತ್ರದ ಪೋಸ್ಟರ್‌ನಲ್ಲಿ ಕಾಳಿಮಾತೆ ಕೈಯಲ್ಲಿ ಸಿಗರೇಟ್ ಇರುವುದನ್ನು ವಿರೋಧಿಸಿ ಚಲನಚಿತ್ರ ನಿರ್ದೇಶಕಿ ಲೀನಾ ಮಣಿಮೇಕಲೈ ಅವರ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ...

ನವದೆಹಲಿ: ಸಾಕ್ಷ್ಯಚಿತ್ರದ ಪೋಸ್ಟರ್‌ನಲ್ಲಿ ಕಾಳಿಮಾತೆ ಕೈಯಲ್ಲಿ ಸಿಗರೇಟ್ ಇರುವುದನ್ನು ವಿರೋಧಿಸಿ ಚಲನಚಿತ್ರ ನಿರ್ದೇಶಕಿ ಲೀನಾ ಮಣಿಮೇಕಲೈ ಅವರ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. 

ಸುಪ್ರೀಂ ಕೋರ್ಟ್ ಬಲವಂತದ ಕ್ರಮದಿಂದ ರಕ್ಷಣೆ ನೀಡಿದ್ದರಿಂದ ಲೀನಾ ಮಣಿಮೇಕಲೈ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ಕ್ಲಬ್ ಮಾಡಿ ರದ್ದುಗೊಳಿಸುವಂತೆ ಕೋರಿ ನಿರ್ದೇಶಕಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠ, ಮಧ್ಯ ಪ್ರದೇಶ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ದಾಖಲಾದ ಎಫ್‌ಐಆರ್‌ ಮತ್ತು ಅದೇ ಚಿತ್ರಕ್ಕೆ ಸಂಬಂಧಿಸಿದಂತೆ ದಾಖಲಾದ ಇದೇ ರೀತಿಯ ಎಫ್‌ಐಆರ್‌ಗಳಿಂದ ರಕ್ಷಣೆ ನೀಡಿದೆ.

ಎಫ್‌ಐಆರ್ ದಾಖಲಾದ ರಾಜ್ಯಗಳ ಪ್ರತಿಕ್ರಿಯೆಯನ್ನು ಕೋರಿ ಸುಪ್ರೀಂ ಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ನೀಡಿ, ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 17ಕ್ಕೆ ಮುಂದೂಡಿದೆ.

ಲೀನಾ ಪರ ವಾದ ಮಂಡಿಸಿದ ವಕೀಲೆ ಕಾಮಿನಿ ಜೈಸ್ವಾಲ್ ಅವರು, ನಿರ್ದೇಶಕಿ ವಿರುದ್ಧ ಎಫ್‌ಐಆರ್ ದಾಖಲಿಸುವುದರ ಜೊತೆಗೆ ಲುಕ್‌ಔಟ್ ನೋಟಿಸ್ ಸಹ ಹೊರಡಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ದೇವಿಯ ಚಿತ್ರಣದ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ಲೀನಾಗೆ ಇರಲಿಲ್ಲ ಮತ್ತು ದೇವಿಯನ್ನು ಅಂತರ್ಗತ ಅರ್ಥದಲ್ಲಿ ಚಿತ್ರಿಸುವುದು ಅವರ ಉದ್ದೇಶವಾಗಿತ್ತು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT