ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ 
ದೇಶ

ಪರೋಲ್ ಪಡೆದು ಜೈಲಿನಿಂದ ಹೊರಬಂದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ

ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್  40 ದಿನಗಳ ಪರೋಲ್ ಪಡೆದಿದ್ದು, ಸುನಾರಿಯಾ ಜೈಲಿನಿಂದ ಶನಿವಾರ ಹೊರಗೆ ಬಂದಿದ್ದಾರೆ. ಇಂದು ಮಧ್ಯಾಹ್ನ ಅವರು ಜೈಲಿನಿಂದ ಹೊರಗೆ ಬಂದಿರುವುದಾಗಿ ರೋಹ್ಟಕ್ ನ ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್  40 ದಿನಗಳ ಪರೋಲ್ ಪಡೆದಿದ್ದು, ಸುನಾರಿಯಾ ಜೈಲಿನಿಂದ ಶನಿವಾರ ಹೊರಗೆ ಬಂದಿದ್ದಾರೆ. ಇಂದು ಮಧ್ಯಾಹ್ನ ಅವರು ಜೈಲಿನಿಂದ ಹೊರಗೆ ಬಂದಿರುವುದಾಗಿ ರೋಹ್ಟಕ್ ನ ಪೊಲೀಸರು ತಿಳಿಸಿದ್ದಾರೆ.

ರಹೀಮ್ ಸಿಂಗ್ ಉತ್ತರ ಪ್ರದೇಶದ ಬಾಗ್‌ಪತ್‌ನ ಬರ್ನಾವಾದಲ್ಲಿರುವ ಡೇರಾ ಸಚ್ಚಾ ಸೌದಾ ಆಶ್ರಮಕ್ಕೆ ಹೋಗಲಿದ್ದಾರೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ. ತನ್ನ ಇಬ್ಬರು ಶಿಷ್ಯೆಯಂದಿರ  ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿರುವ ಡೇರಾ ಮುಖ್ಯಸ್ಥರಿಗೆ ಮೂರು ತಿಂಗಳ ನಂತರ 40 ದಿನಗಳ ಮತ್ತೊಂದು ಪರೋಲ್ ಸಿಕ್ಕಿದೆ.

ಇದನ್ನು ನಿಯಮಗಳಿಗೆ ಅನುಸಾರವಾಗಿ ನೀಡಲಾಗಿದೆ"ಎಂದು ರೋಹ್ಟಕ್‌ನ ವಿಭಾಗೀಯ ಆಯುಕ್ತ ಸಂಜೀವ್ ವರ್ಮಾ ಹೇಳಿದ್ದಾರೆ. ಸಿಂಗ್ ಅವರಿಗೆ ಈ ಹಿಂದೆ ನೀಡಲಾಗಿದ್ದ ಪರೋಲ್ ಅವಧಿ ನವೆಂಬರ್ 25 ರಂದು ಕೊನೆಗೊಂಡಿತ್ತು. ಅಕ್ಟೋಬರ್ 14 ರಂದು ಜೈಲಿನಿಂದ ಬಿಡುಗಡೆಯಾದ ನಂತರ ಡೇರಾ ಮುಖ್ಯಸ್ಥ ತನ್ನ ಬರ್ನಾವಾ ಆಶ್ರಮಕ್ಕೆ ಹೋಗಿದ್ದರು.

ಸಿಂಗ್ 40 ದಿನಗಳ ಮತ್ತೊಂದು ಪರೋಲ್ ಅರ್ಜಿ ಸಲ್ಲಿಸಿದ್ದು, ಅದನ್ನು ರೋಹ್ಟಕ್ ವಿಭಾಗೀಯ ಆಯುಕ್ತರಿಗೆ ರವಾನಿಸಲಾಗಿದೆ ಎಂದು ಹರಿಯಾಣ ಜೈಲು ಸಚಿವ ರಂಜಿತ್ ಸಿಂಗ್ ಚೌತಾಲಾ ಈ ಹಿಂದೆ ಹೇಳಿದ್ದರು. ಜನವರಿ 25 ರಂದು ಮಾಜಿ ಡೇರಾ ಮುಖ್ಯಸ್ಥ ಶಾ ಸತ್ನಾಮ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಿಂಗ್ ಭಾಗವಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಜೂನ್‌ನಲ್ಲಿ ಒಂದು ತಿಂಗಳ ಪರೋಲ್‌ನಲ್ಲಿ ಸಿಂಗ್ ಜೈಲಿನಿಂದ ಹೊರಬಂದಿದ್ದರು. ಇದಲ್ಲದೆ, ಪಂಜಾಬ್ ವಿಧಾನಸಭಾ ಚುನಾವಣೆಗೆ ಕೇವಲ ಎರಡು ವಾರಗಳ ಮೊದಲು ಫೆಬ್ರವರಿ 7, 2022 ರಿಂದ ಅವರು ಮೂರು ವಾರಗಳ ಕಾಲ ಜೈಲಿನಿಂದ ಹೊರಗೆ ಬಂದಿದ್ದರು.  2021ರಲ್ಲಿ ಡೇರಾ ಮ್ಯಾನೇಜರ್ ರಂಜಿತ್ ಸಿಂಗ್ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದಕ್ಕಾಗಿ ಡೇರಾ ಮುಖ್ಯಸ್ಥ, ಇತರ ನಾಲ್ವರು, ಶಿಕ್ಷೆಗೊಳಗಾದರು. 16 ವರ್ಷಗಳ ಹಿಂದೆ ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ 2019 ರಲ್ಲಿ ಡೇರಾ ಮುಖ್ಯಸ್ಥ ಮತ್ತು ಇತರ ಮೂವರಿಗೆ ಶಿಕ್ಷೆ ವಿಧಿಸಲಾಗಿತ್ತು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT