ಈಜಿಪ್ಟ್ ಅಧ್ಯಕ್ಷ 
ದೇಶ

ಈ ವರ್ಷದ ಗಣರಾಜ್ಯೋತ್ಸವಕ್ಕೆ ಈಜಿಪ್ಟ್ ಅಧ್ಯಕ್ಷ ಮುಖ್ಯ ಅತಿಥಿ

ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಈ ವರ್ಷ 74ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. 

ನವದೆಹಲಿ: ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಈ ವರ್ಷ 74ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. 

ಅವರು ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಆಗಮಿಸುತ್ತಿದ್ದಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.

ಅರಬ್ ರಿಪಬ್ಲಿಕ್ ದೇಶ ಈಜಿಪ್ಟ್ ನ ಅಧ್ಯಕ್ಷರು ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು. ಈಜಿಪ್ಟ್ ಸೇನೆಯ ಮಿಲಿಟರಿ ಪಡೆ ಸಹ ಭಾರತದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗಿಯಾಗಲಿದೆ ಎಂದು ಹೇಳಿದೆ.

ತಮ್ಮ ಭಾರತ ಭೇಟಿ ಸಂದರ್ಭದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಇಲ್ಲಿನ ಉದ್ಯಮ ಸಮುದಾಯವನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಅವರ ಡೊತೆ ಈಜಿಪ್ಟ್ ನ ಉನ್ನತ ಮಟ್ಟದ ನಿಯೋಗ ಆಗಮಿಸಲಿದೆ. 68 ವರ್ಷದ ಈಜಿಪ್ಟ್ ಅಧ್ಯಕ್ಷರು ಭಾರತಕ್ಕೆ ಇದೇ 24ರಂದು ಆಗಮಿಸಲಿದ್ದು ಅವರ ಭೇಟಿ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಸಹಾಯವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್