ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

240 ಪ್ರಯಾಣಿಕರಿದ್ದ ಮಾಸ್ಕೋ-ಗೋವಾ ವಿಮಾನಕ್ಕೆ ಬಾಂಬ್ ಬೆದರಿಕೆ!

ರಷ್ಯಾದ ರಾಜಧಾನಿ ಮಾಸ್ಕೋದಿಂದ 240 ಪ್ರಯಾಣಿಕರ ಹೊತ್ತು ಗೋವಾಗೆ ಹೊರಟಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮಾಸ್ಕೋ-ಗೋವಾ ವಿಮಾನಕ್ಕೆ ಬಾಂಬ್ ಬೆದರಿಕೆ
Srinivasa Murthy VN
Updated On : 21 Jan 2023, 2:22 pm

ಪಣಜಿ: ರಷ್ಯಾದ ರಾಜಧಾನಿ ಮಾಸ್ಕೋದಿಂದ 240 ಪ್ರಯಾಣಿಕರ ಹೊತ್ತು ಗೋವಾಗೆ ಹೊರಟಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ತಿಳಿದುಬಂದಿದೆ.

ರಷ್ಯಾದ ರಾಜಧಾನಿ ಮಾಸ್ಕೋದಿಂದ ಗೋವಾಕ್ಕೆ 240 ಪ್ರಯಾಣಿಕರ ಹೊತ್ತು ಟೇಕ್ ಆಫ್ ಆಗಿತ್ತು. ಈ ವೇಳೆ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ ಮುಂಜಾನೆ ಉಜ್ಬೇಕಿಸ್ತಾನಕ್ಕೆ ತಿರುಗಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮೂತ್ರ ವಿಸರ್ಜನೆ ಪ್ರಕರಣ: ಏರ್ ಇಂಡಿಯಾಗೆ 30 ಲಕ್ಷ ರೂ. ದಂಡ, ಪೈಲಟ್ ಪರವಾನಗಿ ಅಮಾನತು- DGCA

Advertisement

Advertisement

ದಕ್ಷಿಣ ಗೋವಾದ ದಾಬೋಲಿಮ್‌ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 4.15ಕ್ಕೆ ವಿಮಾನ ಲ್ಯಾಂಡ್ ಆಗಬೇಕಿತ್ತು. ‘ಅಜುರ್ ಏರ್’ ನಿರ್ವಹಿಸುತ್ತಿರುವ ವಿಮಾನ (AZV2463) ಭಾರತೀಯ ವಾಯುಪ್ರದೇಶ ಪ್ರವೇಶಿಸುವ ಮುನ್ನವೇ, ಅದನ್ನು ಬೇರೆ ಕಡೆಗೆ ಕಳುಹಿಸಲಾಯಿತು. ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಸಂದೇಶ ರಾತ್ರಿ 12.30ಕ್ಕೆ ದಾಬೋಲಿಮ್‌ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಇಮೇಲ್ ಮೂಲಕ ಬಂದಿರುವುದಾಗಿ ತಿಳಿಯುತ್ತಲೇ ವಿಮಾನವನ್ನು ಬೇರೆಡೆಗೆ ತಿರುಗಿಸಲಾಯಿತು ಎಂದು ಅವರು ಹೇಳಿದರು.

ಇದನ್ನೂ ಓದಿ: 35 ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಹಾರಿದ ವಿಮಾನ: ಡಿಜಿಸಿಎಯಿಂದ ತನಿಖೆಗೆ ಆದೇಶ

ಎರಡು ವಾರಗಳ ಹಿಂದೆ, ಮಾಸ್ಕೋ–ಗೋವಾ ವಿಮಾನವೊಂದಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ವಿಮಾನವನ್ನು ಗುಜರಾತ್‌ನ ಜಾಮ್‌ನಗರದಲ್ಲಿ ತುರ್ತಾಗಿ ಲ್ಯಾಂಡ್‌ ಮಾಡಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement