ಬ್ರಿಜ್ ಭೂಷಣ್ ಶರಣ್ ಸಿಂಗ್ 
ದೇಶ

ಕ್ರೀಡಾಪಟುಗಳ ಪ್ರತಿಭಟನೆ ಒಂದು ಪಿತೂರಿ: ಅಧ್ಯಕ್ಷರ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ತಿರಸ್ಕರಿಸಿದ ಡಬ್ಲ್ಯುಎಫ್‌ಐ

ಭಾರತೀಯ ಕುಸ್ತಿ ಫೆಡರೇಶನ್(WFI) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪವನ್ನು ಡಬ್ಲ್ಯುಎಫ್‌ಐ ತಿರಸ್ಕರಿಸಿದೆ.

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್(WFI) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪವನ್ನು ಡಬ್ಲ್ಯುಎಫ್‌ಐ ತಿರಸ್ಕರಿಸಿದೆ.

ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಸೇರಿದಂತೆ ಯಾರಿಂದಲೂ ವೈಯಕ್ತಿಕವಾಗಿ WFI ನಲ್ಲಿ ಅನಿಯಂತ್ರಿತ ಅಥವಾ ದುರುಪಯೋಗಕ್ಕೆ ಯಾವುದೇ ಅವಕಾಶವಿಲ್ಲ. ವ್ಯಕ್ತಿಯ ಮಾನಹಾನಿ ಮಾಡುವ ಉದ್ದೇಶದಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದಾರೆ. ಇದರ ಹಿಂದೆ ಕ್ರೀಡಾಪಟುಗಳ ಕೆಲವು ವೈಯಕ್ತಿಕ ಮತ್ತು ಗುಪ್ತ ಅಜೆಂಡಾ ಇದೆ ಎಂದು WFI ಕ್ರೀಡಾ ಸಚಿವಾಲಯಕ್ಕೆ ಮಾಹಿತಿ ನೀಡಿದೆ.

ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್, ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಧರಣಿ ನಡೆಸುತ್ತಿದ್ದರು. ಪ್ರಸ್ತುತ, ಆಟಗಾರರು ತಮ್ಮ ಕುಂದುಕೊರತೆಗಳನ್ನು ಪರಿಹರಿಸುವ ಭರವಸೆಯನ್ನು ಪಡೆದ ನಂತರ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.

ಏನಿದು ಘಟನೆ?
ಡಬ್ಲ್ಯುಎಫ್‌ಐ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿನೇಶ್ ಫೋಗಟ್ ಜನವರಿ 11ರಂದು ಆರೋಪಿಸಿದ್ದರು. ಆದರೆ ಅಧ್ಯಕ್ಷ ಬ್ರಿಜ್ ಭೂಷಣ್ ಈ ಆರೋಪಗಳನ್ನು ತಳ್ಳಿಹಾಕಿದ್ದರು. ಇದೇ ವೇಳೆ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ಮತ್ತು ಒಲಿಂಪಿಯನ್ ವಿನೇಶ್, ಲಖನೌದಲ್ಲಿ ನಡೆದ ರಾಷ್ಟ್ರೀಯ ಶಿಬಿರದಲ್ಲಿ ಹಲವಾರು ತರಬೇತುದಾರರು ಮಹಿಳಾ ಕುಸ್ತಿಪಟುಗಳನ್ನು ಶೋಷಿಸಿದ್ದಾರೆ ಎಂದು ಆರೋಪಿಸಿದ್ದರು. 

ತನಿಖೆಗೆ ಸಮಿತಿ ರಚನೆ
ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ತನಿಖೆಗಾಗಿ ಏಳು ಸದಸ್ಯರ ಸಮಿತಿಯನ್ನು ರಚಿಸಲಾಗಿದ್ದು ಇದರಲ್ಲಿ ಎಂಸಿ ಮೇರಿ ಕೋಮ್ ಮತ್ತು ಯೋಗೇಶ್ವರ್ ದತ್ ಅವರಂತಹ ಕ್ರೀಡಾಪಟುಗಳು ಇದ್ದಾರೆ.

ಖ್ಯಾತ ಬಾಕ್ಸರ್ ಮೇರಿ ಕೋಮ್ ಮತ್ತು ಕುಸ್ತಿಪಟು ಯೋಗೇಶ್ವರ್ ಅವರಲ್ಲದೆ, ಬಿಲ್ಲುಗಾರ ಡೋಲಾ ಬ್ಯಾನರ್ಜಿ ಮತ್ತು ಭಾರತೀಯ ವೇಟ್‌ಲಿಫ್ಟಿಂಗ್ ಫೆಡರೇಶನ್ ಅಧ್ಯಕ್ಷ ಸಹದೇವ್ ಯಾದವ್ ಕೂಡ ಇದ್ದಾರೆ. ಇಡೀ ಪ್ರಕರಣದಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ರಾಜೀನಾಮೆಗೆ ಆಟಗಾರರು ನಿರಂತರವಾಗಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT