ದೇಶ

ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ.3 ಕೋಟಿಗೂ ಅಧಿಕ ನಗದು ವಶ

Nagaraja AB

ನವದೆಹಲಿ: ರಾಷ್ಟ್ರ ರಾಜಧಾನಿಯ ಜನದಟ್ಟಣೆಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ರೂ. 3 ಕೋಟಿಗೂ ಅಧಿಕ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸರಕು ಟರ್ಮಿನಲ್ ನಲ್ಲಿ ಲಗೇಜ್ ಪರಿಶೀಲಿಸುವಾಗ ಈ ಹಣ ದೊರೆತಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. 

ವಶಪಡಿಸಿಕೊಂಡ ನಗದು ಎಣಿಕೆ ಕಾರ್ಯ ಇನ್ನೂ ಮುಂದುವರೆದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇಂದ್ರೀಯ ಕೈಗಾರಿಕ ಭದ್ರತಾ ಪಡೆ ಹಾಗೂ ದೆಹಲಿ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ಅವರು  ಸುದ್ದಿಸಂಸ್ಥೆಯೊಂದಕ್ಕೆ ಹೇಳಿರುವುದಾಗಿ ವರದಿಯಾಗಿದೆ. 

SCROLL FOR NEXT