ಹೈದ್ರಾಬಾದ್ ವಿವಿ ಆವರಣದಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ 
ದೇಶ

ಹೈದರಾಬಾದ್ ವಿವಿ ಕ್ಯಾಂಪಸ್‌ನಲ್ಲಿ 'ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ' ಪ್ರದರ್ಶನ

ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ಸಾಕ್ಷ್ಯಚಿತ್ರವನ್ನು ಯು ಟ್ಯೂಬ್ ಹಾಗೂ ಟ್ವಿಟರ್ ನಲ್ಲಿ ಕೇಂದ್ರ ಸರ್ಕಾರ ನಿರ್ಬಂಧಿಸಿರುವಂತೆಯೇ, ಹೈದ್ರಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಪ್ರದರ್ಶಿಸಲಾಗಿದೆ.

ಹೈದ್ರಾಬಾದ್: ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ಸಾಕ್ಷ್ಯಚಿತ್ರವನ್ನು ಯು ಟ್ಯೂಬ್ ಹಾಗೂ ಟ್ವಿಟರ್ ನಲ್ಲಿ ಕೇಂದ್ರ ಸರ್ಕಾರ ನಿರ್ಬಂಧಿಸಿರುವಂತೆಯೇ, ಹೈದ್ರಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಪ್ರದರ್ಶಿಸಲಾಗಿದೆ.

ಇಲ್ಲಿನ ಸೆಂಟ್ರಲ್ ಯೂನಿವರ್ಸಿಟಿಯ ವಿದ್ಯಾರ್ಥಿಗಳ ಗುಂಪೊಂದು ಭಾನುವಾರ ರಾತ್ರಿ ಕ್ಯಾಂಪಸ್  ಆವರಣದಲ್ಲಿ ಬಿಬಿಸಿ ನಿರ್ಮಿಸಿರುವ ಇಂಡಿಯಾ: ದಿ ಮೋದಿ ಕ್ವೆಶ್ಚನ್ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಗಿದೆ ಎನ್ನಲಾಗಿದೆ. ಈ ಸಂಬಂಧ ಲಿಖಿತ ದೂರಿನ ಮೇರೆಗೆ ತನಿಖೆ ಆರಂಭಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರವು ದೇಶದಾದ್ಯಂತ ಸಾಕ್ಷ್ಯಚಿತ್ರವನ್ನು ನಿಷೇಧಿಸಿರುವ ಸಮಯದಲ್ಲಿ ಹೈದ್ರಾಬಾದ್ ವಿವಿ ಕ್ಯಾಂಪಸ್ ನಲ್ಲಿ ಸಾಕ್ಷ್ಯಚಿತ್ರ ಪ್ರದರ್ಶಿಸಲಾಗಿದೆ. ಮತ್ತೊಂದೆಡೆ ಮಂಗಳವಾರ ರಾತ್ರಿ ತನ್ನ ಕಚೇರಿಯಲ್ಲಿ ಸಾಕ್ಷ್ಯಚಿತ್ರ ಪ್ರದರ್ಶಿಸುವುದಾಗಿ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ (ಜೆಎನ್ ಯುಎಸ್ ಯು) ತಿಳಿಸಿದೆ. ಈ ಸಂಬಂಧ ಸೋಮವಾರ ಭಿತ್ತಿಪತ್ರ ಹಂಚಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್