ವಂದೇ ಭಾರತ್ ಎಕ್ಸ್ ಪ್ರೆಸ್ 
ದೇಶ

ಕೇಂದ್ರ ಬಜೆಟ್: ಈ ಬಾರಿ ರೈಲ್ವೆ ಅನುದಾನದಲ್ಲಿ ಶೇ.20-25 ರಷ್ಟು ಹೆಚ್ಚಳ ಸಾಧ್ಯತೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು ಮಂಡಿಸಲಿರುವ 2023-24ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ರೈಲ್ವೆ ಯೋಜನೆಗಳಿಗೆ ಮತ್ತು ಆಧುನೀಕರಣ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ನೀಡುವ ಸಾಧ್ಯತೆ ಇದೆ.

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು ಮಂಡಿಸಲಿರುವ 2023-24ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ರೈಲ್ವೆ ಯೋಜನೆಗಳಿಗೆ ಮತ್ತು ಆಧುನೀಕರಣ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ನೀಡುವ ಸಾಧ್ಯತೆ ಇದೆ.

ಮುಂಬರುವ ಬಜೆಟ್‌ನಲ್ಲಿ ಹೊಸ ವಂದೇ ಭಾರತ್ ಮತ್ತು ಹೈಡ್ರೋಜನ್ ಚಾಲಿತ ಪ್ಯಾಸೆಂಜರ್ ರೈಲುಗಳು ಸೇರಿದಂತೆ ಹೊಸ ರೈಲುಗಳು ಘೋಷಣೆಯಾಗುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ, ಇಡೀ ರೈಲ್ವೆ ವ್ಯವಸ್ಥೆಯ ಮೂಲಸೌಕರ್ಯವನ್ನು ಹೆಚ್ಚಿಸಲು ಮೋದಿ ಸರ್ಕಾರ ರೈಲ್ವೆ ಬಜೆಟ್ ಅನ್ನು ಶೇ. 20-25 ರಷ್ಟು ಹೆಚ್ಚಿಸಲು ಮುಂದಾಗಿದೆ.

ಮೋದಿ ಸರ್ಕಾರ ಈ ಬಾರಿ 400ಕ್ಕೂ ಹೆಚ್ಚು ವಂದೇ ಭಾರತ್ ರೈಲುಗಳ ಮತ್ತು ಮೂರು ಡಜನ್‌ಗಿಂತಲೂ ಹೆಚ್ಚು ಹೈಡ್ರೋಜನ್-ಚಾಲಿತ ಪ್ರಯಾಣಿಕ ರೈಲುಗಳನ್ನು ಘೋಷಿಸಬಹುದು.

"ಪ್ರಧಾನಿ ನರೇಂದ್ರ ಮೋದಿ ಅವರು 2023ರ ಆಗಸ್ಟ್ 15 ರಂದು ದೇಶವನ್ನುದ್ದೇಶಿಸಿ ಮಾಡುವ ಭಾಷಣದಲ್ಲಿ ಹೈಡ್ರೋಜನ್ ಚಾಲಿತ ರೈಲುಗಳನ್ನು ಘೋಷಿಸುವ ಸಾಧ್ಯತೆ ಇದೆ. ಜೊತೆಗೆ ಭಾರತೀಯ ರೈಲ್ವೆಯ ಇತ್ತೀಚಿನ ಸಾಧನೆಗಳನ್ನು ಎತ್ತಿ ತೋರಿಸಲಿದ್ದಾರೆ" ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT