ವಿಮಾನದಲ್ಲಿ ವಾಕ್ಸಮರದ ಚಿತ್ರ 
ದೇಶ

ಅಸಭ್ಯ ವರ್ತನೆ: ಪ್ರಯಾಣಿಕನನ್ನು ವಿಮಾನದಿಂದ ಇಳಿಸಿದ ಸ್ಪೈಸ್ ಜೆಟ್ ಸಿಬ್ಬಂದಿ! ವಿಡಿಯೋ

ವಿಮಾನದಲ್ಲಿನ ಮಹಿಳಾ ಸಿಬ್ಬಂದಿಯೊಬ್ಬರೊಂದಿಗೆ ಅನುಚಿತ ವರ್ತನೆಯಿಂದಾಗಿ ಪ್ರಯಾಣಿಕರೊಬ್ಬರನ್ನು ಸ್ಪೈಸ್ ಜೆಟ್ ವಿಮಾನದಿಂದ ಕೆಳಗೆ ಇಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.

ನವದೆಹಲಿ: ವಿಮಾನದಲ್ಲಿನ ಮಹಿಳಾ ಸಿಬ್ಬಂದಿಯೊಬ್ಬರೊಂದಿಗೆ ಅನುಚಿತ ವರ್ತನೆಯಿಂದಾಗಿ ಪ್ರಯಾಣಿಕರೊಬ್ಬರನ್ನು ಸ್ಪೈಸ್ ಜೆಟ್ ವಿಮಾನದಿಂದ ಕೆಳಗೆ ಇಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.

ಮಹಿಳಾ ಸಿಬ್ಬಂದಿಯೊಂದಿಗೆ ಪುರುಷ ಪ್ರಯಾಣಿಕ ಅನುಚಿತವಾಗಿ ವರ್ತಿಸಿದ ಆರೋಪದ ನಂತರ ಉಂಟಾದ ಮಾತಿನ ಚಕಮಕಿಯನ್ನು ವಿಮಾನದ ಸಿಬ್ಬಂದಿ ಹಾಗೂ ಪ್ರಯಾಣಿಕರನ್ನು ನೋಡುತ್ತಿರುವ ವಿಡಿಯೋವನ್ನು ಎಎನ್ ಐ ಸುದ್ದಿಸಂಸ್ಥೆ ಹಂಚಿಕೊಂಡಿದೆ. ನಂತರ ಪ್ರಯಾಣಿಕವನ್ನು ವಿಮಾನದಿಂದ ಕೆಳಗೆ ಇಳಿಸಲಾಗಿದೆ. ದೆಹಲಿ- ಹೈದ್ರಾಬಾದ್ ಮಾರ್ಗದ ಎಸ್ ಜಿ-8133 ವಿಮಾನದಲ್ಲಿ ಈ ಘಟನೆ ನಡೆದಿದೆ. 

ದೆಹಲಿಯಲ್ಲಿ ವಿಮಾನ ಹತ್ತುವಾಗ, ಪುರುಷ ಪ್ರಯಾಣಿಕನೊಬ್ಬ ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ವಿಮಾನದ ಸಿಬ್ಬಂದಿ ಈ ವಿಷಯವನ್ನು ಭದ್ರತಾ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ. ಬಳಿಕ ಅವರನ್ನು ಕೆಳಗಿಳಿಸಿ, ಭದ್ರತಾ ತಂಡದ ವಶಕ್ಕೆ ನೀಡಲಾಯಿತು ಎಂದು ಏರ್ ಲೈನ್ಸ್ ಹೇಳಿಕೆಯಲ್ಲಿ ತಿಳಿಸಿದೆ. 

ಮಹಿಳಾ ಸಿಬ್ಬಂದಿಯೊಬ್ಬರನ್ನು ಪ್ರಯಾಣಿಕ ಅಸಭ್ಯವಾಗಿ ಮುಟ್ಟಿದ ಎಂದು ಸಿಬ್ಬಂದಿ ಆರೋಪಿಸಿದರೆ, ಇದು ಆಕಸ್ಮಿಕವಾಗಿ ನಡೆದ ಘಟನೆ ಎಂದು ಪ್ರಯಾಣಿಕರು ಹೇಳಿದ್ದಾರೆ. ತದನಂತರ ಪ್ರಯಾಣಿಕ ಕ್ಷಮೆಯಾಚಿಸಿ ಪತ್ರ ಬರೆದಿದ್ದಾರೆ. ಆದರೆ, ಮುಂದೆ ಯಾವುದೇ ಜಗಳ ನಡಯದಂತೆ ಆತನನ್ನು ವಿಮಾನದಿಂದ ಕೆಳಗಿಳಿಸಲಾಯಿತು ಎಂದು ಏರ್ ಲೈನ್ಸ್ ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!