ದೇಶ

ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೊಮ್ಮೆ ರಿಲೀಫ್: ಮಧ್ಯಂತರ ರಕ್ಷಣೆ ತಡೆ ಆದೇಶ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Sumana Upadhyaya

ನವದೆಹಲಿ: ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣ ಸಂಬಂಧ ನೀಡಲಾಗಿದ್ದ ಮಧ್ಯಂತರ ರಕ್ಷಣೆ ಆದೇಶವನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಈ ಮೂಲಕ ಪ್ರಕರಣದಲ್ಲಿ ಯಡಿಯೂರಪ್ಪನವರಿಗೆ ಮತ್ತೊಮ್ಮೆ ನಿರಾಳತೆ ಸಿಕ್ಕಿದೆ. ಡಿ ನೋಟಿಫಿಕೇಷನ್ ಪ್ರಕರಣ ಸಂಬಂಧ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಈ ಹಿಂದೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿತ್ತು. 

ಅದನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಆಲಂಪಾಷ ಅವರು ಮದ್ಯಂತರ ಆದೇಶ ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ, ಅರ್ಜಿ ವಜಾಗೊಳಿಸಿ ಆದೇಶ ನೀಡಿದೆ. 

ಡಿ ನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯ ಅರ್ಜಿ ವಿಚಾರಣೆ ಜನವರಿ 30ರಂದು ನಡೆಯಲಿದೆ.

SCROLL FOR NEXT