ರಕ್ಷಣಾ ಕಾರ್ಯಾಚರಣೆ ಚಿತ್ರ 
ದೇಶ

ಲಖನೌ: ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತ, ಮೂವರು ದುರ್ಮರಣ

ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತದಿಂದ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌನ ಹರ್ಜತ್ ಗಂಜ್ ನಲ್ಲಿ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಲಖನೌ: ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತದಿಂದ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌನ ಹರ್ಜತ್ ಗಂಜ್ ನಲ್ಲಿ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಹಲವು ಮಂದಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. 

ವಿಪತ್ತು ನಿರ್ವಹಣಾ ಸಿಬ್ಬಂದಿ, ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಇಲ್ಲಿಯವರೆಗೂ ಮೂರು ಮೃತದೇಹಗಳು ಪತ್ತೆಯಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಬ್ರಿಜೇಶ್ ಪಠಾಕ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭೂಕಂಪನದಿಂದ ಕಟ್ಟಡ ಕುಸಿತವಾಗಿರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಲಖನೌ ಜಿಲ್ಲಾಧಿಕಾರಿ ಸೂರ್ಯಪಾಲ್ ಗಂಗವಾರ್, ಈಗ ಏನು ಅಂತಾ ಹೇಳಲು ಸಾಧ್ಯವಾಗುತ್ತಿಲ್ಲ, ಪರಿಶೀಲನೆ ನಂತರ ಕಾರಣ ತಿಳಿದುಬರಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ