ಸಾಂದರ್ಭಿಕ ಚಿತ್ರ 
ದೇಶ

ನೇಪಾಳದಲ್ಲಿ 5.8 ತೀವ್ರತೆಯ ಭೂಕಂಪ; ದೆಹಲಿ, ರಾಜಸ್ಥಾನದಲ್ಲೂ ಕಂಪಿಸಿದ ಭೂಮಿ

ನೆರೆಯ ನೇಪಾಳದಲ್ಲಿ ಮಂಗಳವಾರ ಮಧ್ಯಾಹ್ನ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ಪ್ರದೇಶದ ಸುತ್ತಮುತ್ತಲಿನ ನಗರಗಳಲ್ಲಿ ಮತ್ತು ಜೈಪುರದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. 

ನವದೆಹಲಿ: ನೆರೆಯ ನೇಪಾಳದಲ್ಲಿ ಮಂಗಳವಾರ ಮಧ್ಯಾಹ್ನ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ಪ್ರದೇಶದ ಸುತ್ತಮುತ್ತಲಿನ ನಗರಗಳಲ್ಲಿ ಮತ್ತು ಜೈಪುರದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. 

ಇಂದಿು ಮಧ್ಯಾಹ್ನ 2:28 ಕ್ಕೆ ಭೂಮಿ ಕಂಪಿಸಿದ್ದು, ಉತ್ತರಾಖಂಡದ ಪಿಥೋರಘಢ್ ನಿಂದ ಪೂರ್ವಕ್ಕೆ 148 ಕಿಮೀ ದೂರದ ನೇಪಾಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

"ನನಗೆ ಕಂಪನದ ಅನುಭವವಾಯಿತು. ಇದು ಒಂದು ರೀತಿಯಲ್ಲಿ ಭಯಾನಕವಾಗಿತ್ತು" ಎಂದು ನೋಯ್ಡಾದ ಬಹುಮಹಡಿ ಗೋಪುರದಲ್ಲಿ ವಾಸಿಸುವ ಶಾಂತನು ಅವರು ಹೇಳಿದ್ದಾರೆ.

"ಭೂಕಂಪ ಸಂಭವಿಸಿದಾಗ ನಾನು ಸಿವಿಕ್ ಸೆಂಟರ್‌ನ ಐದನೇ ಮಹಡಿಯಲ್ಲಿದ್ದೆ. ನನ್ನ ಕಾಲುಗಳ ಕೆಳಗೆ ಘರ್ಜನೆ ಶಬ್ದ ಮತ್ತು ಲಘುವಾದ ಅಲುಗಾಡುವಿಕೆಯ ಅನುಭ ಆಯಿತು" ಎಂದು ದೆಹಲಿ ನಿವಾಸಿ ಅಮಿತ್ ಪಾಂಡೆ ಅವರು ತಿಳಿಸಿದ್ದಾರೆ.

ರಾಜಸ್ಥಾನದ ರಾಜಧಾನಿ ಜೈಪುರದ ಕೆಲವು ಭಾಗಗಳಲ್ಲಿಯೂ ಕಂಪನದ ಅನುಭವವಾಗಿದೆ. ಇದುವರೆಗೂ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿ ಬಗ್ಗೆ ವರದಿಯಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ