ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ 
ದೇಶ

ಜೆಎನ್‌ಯುಎಸ್‌ಯು ಕಚೇರಿಯಲ್ಲಿ ಇಂದು ರಾತ್ರಿ 9 ಗಂಟೆಗೆ ಪ್ರಧಾನಿ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕುರಿತಾದ ಬಿಬಿಸಿ ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ಹೆಸರಿನ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಮಂಗಳವಾರ ರಾತ್ರಿ ತನ್ನ ಕಚೇರಿ ಆವರಣದಲ್ಲಿ ಪ್ರದರ್ಶಿಸುವುದಾಗಿ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ (ಜೆಎನ್‌ಯುಎಸ್‌ಯು) ಸದಸ್ಯರೊಬ್ಬರು ಸೋಮವಾರ ತಿಳಿಸಿದ್ದಾರೆ. 

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಕುರಿತಾದ ಬಿಬಿಸಿ ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ಹೆಸರಿನ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಮಂಗಳವಾರ ರಾತ್ರಿ ತನ್ನ ಕಚೇರಿ ಆವರಣದಲ್ಲಿ ಪ್ರದರ್ಶಿಸುವುದಾಗಿ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ (ಜೆಎನ್‌ಯುಎಸ್‌ಯು) ಸದಸ್ಯರೊಬ್ಬರು ಸೋಮವಾರ ತಿಳಿಸಿದ್ದಾರೆ. 

ಸದಸ್ಯರ ಪ್ರಕಾರ, ಸಾಕ್ಷ್ಯಚಿತ್ರವನ್ನು ಮಂಗಳವಾರ ರಾತ್ರಿ 9 ಗಂಟೆಗೆ ಜೆಎನ್‌ಯುಎಸ್‌ಯು ಕಚೇರಿಯಲ್ಲಿ ಪ್ರದರ್ಶಿಸಲು ನಿರ್ಧರಿಸಲಾಗಿದೆ ಮತ್ತು ನಂತರ ಚರ್ಚೆ ನಡೆಯಲಿದೆ.

ಸ್ಕ್ರೀನಿಂಗ್ ಕುರಿತು ಮಾಹಿತಿಯನ್ನು ಹಂಚಿಕೊಂಡ ಜೆಎನ್‌ಯುಎಸ್‌ಯು ಅಧ್ಯಕ್ಷೆ ಐಶೆ ಘೋಷ್, ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಟ್ವಿಟರ್‌ನಲ್ಲಿ ಕರಪತ್ರವನ್ನು ಹಂಚಿಕೊಂಡಿದ್ದಾರೆ ಮತ್ತು 'ಸಾಕ್ಷ್ಯಚಿತ್ರ ಪ್ರದರ್ಶನಕ್ಕಾಗಿ ನಮ್ಮೊಂದಿಗೆ ಸೇರಿ, ಇದನ್ನು ಅತಿದೊಡ್ಡ 'ಪ್ರಜಾಪ್ರಭುತ್ವ'ದ 'ಚುನಾಯಿತ ಸರ್ಕಾರ' ನಿಷೇಧಿಸಿದೆ ಎಂದು ಬರೆದಿದ್ದಾರೆ.

'ಜೆಎನ್‌ಯುಎಸ್‌ಯು ಹೆಸರಿನಲ್ಲಿ ವಿದ್ಯಾರ್ಥಿಗಳ ಗುಂಪೊಂದು ಜನವರಿ 24 ರಂದು (ಮಂಗಳವಾರ) ರಾತ್ರಿ 9 ಗಂಟೆಗೆ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಕರಪತ್ರವನ್ನು ಬಿಡುಗಡೆ ಮಾಡಿರುವುದು ಆಡಳಿತದ ಗಮನಕ್ಕೆ ಬಂದಿದೆ. ಸಾಕ್ಷ್ಯಚಿತ್ರ ಪ್ರದರ್ಶಿಸಲು ವಿದ್ಯಾರ್ಥಿ ಸಂಘಟನೆಯು ತನ್ನ ಅನುಮತಿ ಪಡೆದಿಲ್ಲ. ಇಂತಹ ಅನಧಿಕೃತ ಚಟುವಟಿಕೆಯು ವಿಶ್ವವಿದ್ಯಾಲಯದ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುತ್ತದೆ. ಹೀಗಾಗಿ ಪ್ರದರ್ಶನವನ್ನು ತಕ್ಷಣವೇ ರದ್ದುಪಡಿಸಬೇಕು ಎಂದು ವಿಶ್ವವಿದ್ಯಾಲಯದ ಆಡಳಿತವು ವಿದ್ಯಾರ್ಥಿ ಸಂಘಟನೆಗೆ ಸೂಚಿಸಿದೆ. 

ಉದ್ದೇಶಿತ ಕಾರ್ಯಕ್ರಮವನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ. ವಿಫಲವಾದರೆ, ವಿಶ್ವವಿದ್ಯಾಲಯದ ನಿಯಮಗಳ ಅನುಸಾರ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ’ ಎಂದೂ ಎಚ್ಚರಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಐಶೆ, ಜೆಎನ್‌ಯುಎಸ್‌ಯು ಕಚೇರಿಯಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಯೂನಿಯನ್‌ಗೆ ವಾರ್ಸಿಟಿಯಿಂದ ಅನುಮತಿ ಅಗತ್ಯವಿಲ್ಲದ ಕಾರಣ ನಾವು ಸ್ಕ್ರೀನಿಂಗ್ ಅನ್ನು ರದ್ದುಗೊಳಿಸುವುದಿಲ್ಲ ಎಂದು ಹೇಳಿದರು. 

ಈಮಧ್ಯೆ, ಸರ್ಕಾರವು ಸಾಕ್ಷ್ಯಚಿತ್ರವನ್ನು 'ಪ್ರಚಾರದ ತುಣುಕು' ಎಂದು ಉಲ್ಲೇಖಿಸಿದೆ ಮತ್ತು ಅದರ ಲಿಂಕ್‌ಗಳನ್ನು ಹೊಂದಿರುವ ಹಲವಾರು ಯೂಟ್ಯೂಬ್ ವಿಡಿಯೋಗಳು ಮತ್ತು ಟ್ವಿಟರ್ ಸಂದೇಶಗಳನ್ನು ನಿರ್ಬಂಧಿಸಲು ಸೂಚನೆಗಳನ್ನು ನೀಡಿದೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT