ರಾಷ್ಟ್ರೀಯ ಹೆಣ್ಣುಮಕ್ಕಳ ದಿನ(ಸಂಗ್ರಹ ಚಿತ್ರ) 
ದೇಶ

'ಹೆಣ್ಣು ಮನೆಯ ಕಣ್ಣು, ಹೆಣ್ಣು ಮನೆಯ ನಂದಾದೀಪ', ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: ಅರಿವು ಮೂಡಿಸುವ ಪ್ರಯತ್ನ

ಸಮಾಜದಲ್ಲಿ ಗಂಡು ಮಕ್ಕಳಿಗೆ ಹೋಲಿಸಿದರೆ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ.

ಸಮಾಜದಲ್ಲಿ ಗಂಡು ಮಕ್ಕಳಿಗೆ ಹೋಲಿಸಿದರೆ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ.

ದೇಶದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು 2008 ರಲ್ಲಿ ಭಾರತ ಸರ್ಕಾರ ಪ್ರಾರಂಭಿಸಿತು. ಇದಕ್ಕೆ ಪೂರಕವಾಗಿ ಕಳೆದ ವರ್ಷ "ಬೇಟಿ ಬಚಾವೋ, ಬೇಟಿ ಪಢಾವೋ" (BBBP) ಯೋಜನೆಯ ವಾರ್ಷಿಕೋತ್ಸವವನ್ನು ಆಚರಿಸಲಾಗಿದೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಮುಖ್ಯ ಮಹತ್ವವೆಂದರೆ ಭಾರತದಲ್ಲಿ ಹೆಣ್ಣು ಮಗು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿ, ಜನರಿಗೆ ಈ ಬಗ್ಗೆ ಅರಿವು ಮೂಡಿಸುವುದಾಗಿದೆ. ಇನ್ನು, ಈ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ನೆಪದಲ್ಲಿ ನಮ್ಮ ಸಮಾಜದಲ್ಲಿ ಇನ್ನೂ ಇರುವ ಪ್ರಮುಖ ಸಮಸ್ಯೆಗಳು ಹೀಗಿವೆ: 

ಶಿಕ್ಷಣ: ಭಾರತದಲ್ಲಿ ಬಾಲಕಿಯರ ಶಿಕ್ಷಣಕ್ಕೆ ಇನ್ನು ಹೆಚ್ಚಿನ ಆದ್ಯತೆ ಬೇಕು, ಪ್ರಸ್ತುತ ಪರಿಸ್ಥಿತಿಯ ಪ್ರಕಾರ ಮಹಿಳೆಯರ ಸಾಕ್ಷರತೆಯ ಪ್ರಮಾಣವು 64% ರಷ್ಟಿದೆ. ಆದರೆ, ಇದು ಪುರುಷ ಸಾಕ್ಷರತಾ ಪ್ರಮಾಣಕ್ಕೆ ಹೋಲಿಸಿದರೆ ಕಡಿಮೆಯಿದೆ. ಪುರುಷರ ಸಾಕ್ಷರತಾ ಪ್ರಮಾಣ 82% ರಷ್ಟಿದೆ. ಹೆಣ್ಣು ಮಗುವಿಗೆ ಶಿಕ್ಷಣ ನೀಡುವ ಮೂಲಕ, ನಾವು ಆಕೆಯನ್ನು ಸಶಕ್ತ ಮಹಿಳೆಯಾಗಿಸುವತ್ತ ದಿಟ್ಟ ಹೆಜ್ಜೆಯಿಡಬಹದು.

ಹೆಣ್ಣು ಮಕ್ಕಳ ಪೋಷಣೆ: ಇಂದಿನ ಪರಿಸ್ಥಿತಿಯಲ್ಲಿ ಹೆಣ್ಣು ಮಕ್ಕಳು ತೀವ್ರವಾಗಿ ಬಳಲುತ್ತಿರುವುದು ಅಪೌಷ್ಟಿಕತೆ, ರಕ್ತಹೀನತೆ ಮತ್ತು ವಿಟಮಿನ್ ಎ ಕೊರತೆಯಂತಹ ಸಮಸ್ಯೆಗಳಿಂದ. ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಬಾಲಕಿಯರಲ್ಲಿ ಇದು ತುಂಬಾ ತೀವ್ರವಾಗಿರುತ್ತದೆ. ಆರೋಗ್ಯಕರ ಆಹಾರ ಮತ್ತು ಆರೈಕೆಯ ಕೊರತೆಯಿಂದಾಗಿ ಈ ಅಪೌಷ್ಟಿಕತೆ ಉಂಟಾಗುತ್ತದೆ.

ಬಾಲ್ಯ ವಿವಾಹ: ಅದೇಷ್ಟೇ ಕಠಿಣ ಕಾನೂನು ಜಾರಿಗೆ ಬಂದರೂ ಸಾಮಾಜಿಕ, ಆರ್ಥಿಕ ಹಿನ್ನೆಲೆ ಸೇರಿದ ಸಮುದಾಯಗಳ ಅಪ್ರಾಪ್ತ ಬಾಲಕಿಯರು ಬಾಲ್ಯವಿವಾಹಗಳಿಗೆ ಬಲಿಯಾಗುತ್ತಿದ್ದಾರೆ.

ಕಾನೂನು ಹಕ್ಕುಗಳು ಮತ್ತು ಹೆಣ್ಣು ಮಕ್ಕಳ ರಕ್ಷಣೆ: ಅತ್ಯಾಚಾರ, ಆಸಿಡ್ ದಾಳಿ, ಮರ್ಯಾದಾ ಹತ್ಯೆಗಳು ಮತ್ತು ಬಲವಂತದ ವೇಶ್ಯಾವಾಟಿಕೆಗೆ ಅಮಾಯಕ ಹೆಣ್ಣುಮಕ್ಕಳು ಒಳಗಾಗುವುದು ನಡೆಯುತ್ತಲೆ ಇದೆ. ಈ ಅಪರಾಧಗಳು ಕಳೆದ ಹತ್ತು ವರ್ಷಗಳಲ್ಲಿ ಸಾಕಷ್ಟು ಹೆಚ್ಚಿವೆ. ಯುವತಿಯರನ್ನು ಕಳ್ಳಸಾಗಣೆ ಮಾಡುವ ಅನೇಕ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಸಾಮಾಜಿಕ ಸುಧಾರಣೆಯ ಅಗತ್ಯವಿದೆ.

ಹೆಣ್ಣು ಭ್ರೂಣಹತ್ಯೆ ನಿಲ್ಲಿಸಿ, ಹೆಣ್ಣುಮಕ್ಕಳ ಶಿಕ್ಷಣದ ಹಕ್ಕು ಮುಂತಾದ ಸಮಸ್ಯೆಗಳ ಕುರಿತು 'ಬೇಟಿ ಬಚಾವೋ, ಬೇಟಿ ಪಡಾವೋ' ಅಭಿಯಾನವು ಜನಜಾಗೃತಿ ಮೂಡಿಸುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಣ್ಣುಮಕ್ಕಳಿಗೆ ಶೌಚಾಲಯ ನಿರ್ಮಾಣ ಮಾಡುವಂತಹ ಕಾರ್ಯಗಳಿಗೆ ಸರ್ಕಾರ ಉತ್ತೇಜನ ನೀಡುತ್ತಿದೆ. ಆದರೆ, ಇದು ಎಷ್ಟರ ಮಟ್ಟಿಗೆ ಸಾಕಾರವಾಗಿದೆ ಎಂಬುದನ್ನು ಮತ್ತೆ ಸರ್ಕಾರಗಳೇ ಪ್ರಶ್ನಿಸಿಕೊಳ್ಳಬೇಕಿದೆ.

ಭಾರತೀಯ ಕ್ರೀಡಾ ಇತಿಹಾಸದಲ್ಲಿ ಕ್ರೀಡಾ ಸಚಿವಾಲಯವು ಒಂಬತ್ತು ಮಹಿಳಾ ಕ್ರೀಡಾಪಟುಗಳನ್ನು ಪದ್ಮ ಪ್ರಶಸ್ತಿ 2020 ಕ್ಕೆ ನಾಮನಿರ್ದೇಶನ ಮಾಡಿರುವುದು ಇದೇ ಮೊದಲು. ಅಲ್ಲದೆ, ಈ ವರ್ಷ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಿಆರ್‌ಪಿಎಫ್‌ನ ಎಲ್ಲಾ ಮಹಿಳಾ ಬೈಕರ್ ತುಕಡಿಗಳು ಡೇರ್‌ಡೆವಿಲ್ ಸಾಹಸಗಳನ್ನು ಪ್ರದರ್ಶಿಸಲಿದ್ದಾರೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ 2023: ಘೋಷವಾಕ್ಯ
ರಾಷ್ಟ್ರೀಯ ಹೆಣ್ಣುಮಕ್ಕಳ ದಿನ 2023 ಥೀಮ್ ಅಧಿಕೃತವಾಗಿ ಘೋಷಿಸಿಲ್ಲ. ಆದರೆ 2022ರ ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಥೀಮ್ ಅನ್ನು 'ಉಮಂಗ್ ರಂಗೋಲಿ ಉತ್ಸವ' ಎಂದು ಆಚರಣೆ ಮಾಡಲಾಗಿತ್ತು. 2021ರ ಥೀಮ್ 'ಡಿಜಿಟಲ್ ಜನರೇಷನ್, ನಮ್ಮ ಪೀಳಿಗೆ', ಹಾಗೂ 2020ರ ಥೀಮ್ 'ಮೇರಿ ಅವಾಜ್, ಹಮಾರಾ ಸಕ್ಷಾ ಭವಿಷ್ಯ' ಎನ್ನುವ ಥೀಮ್ ಮೇಲೆ ಆಚರಣೆ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT