ದೇಶ

ಪ್ರಧಾನಿ ಮೋದಿ ಕುರಿತ ಬಿಬಿಪಿ ಸಾಕ್ಷ್ಯಚಿತ್ರ ಪ್ರದರ್ಶನ: ಬಂಧಿತ 13 ಜಾಮಿಯಾ ವಿದ್ಯಾರ್ಥಿಗಳ ಬಿಡುಗಡೆ

Nagaraja AB

ನವದೆಹಲಿ: 2002ರ ಹಿಂಸಾಚಾರ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿದ್ದಕ್ಕಾಗಿ ಬಂಧಿತರಾಗಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾದ 13 ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ನಡೆದ ಗಣರಾಜ್ಯೋತ್ಸವ ಪರೇಡ್ ಬಳಿಕ ಬಂಧಿತ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಜರಾತ್ ಗಲಭೆ ವಿಚಾರವಾಗಿ ಪ್ರಧಾನಿ ಮೋದಿ ಕುರಿತ ವಿಮರ್ಶಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ಲಿಂಕ್ ಗಳನ್ನು  ನಿರ್ಬಂಧಿಸುವಂತೆ ಟ್ಯೂಟರ್ ಹಾಗೂ ಯುಟ್ಯೂಬ್ ಗಳಿಗೆ ಕೇಂದ್ರ ಸರ್ಕಾರ ಇತ್ತೀಚಿಗೆ ಆದೇಶಿಸಿತ್ತು. ಆದಾಗ್ಯೂ,  ಸಾಕ್ಷ್ಯಚಿತ್ರ ಪ್ರದರ್ಶಿಸಲು
ಜಾಮೀಯಾ ಮಿಲಿಯಾ ಇಸ್ಲಾಮಿಯಾದ ವಿದ್ಯಾರ್ಥಿಗಳು ಯೋಜಿಸಿದ್ದರು. 

ಪ್ರದರ್ಶನಕ್ಕೂ ಮುನ್ನಾ ನಾಲ್ವರು ವಿದ್ಯಾರ್ಥಿ ಸಂಘಟನೆಯ ಮುಖಂಡರನ್ನು ಬಂಧಿಸಿದ್ದಾಗಿ ವಿವಿ ಗೇಟ್ ಹೊರಗಡೆ ಪ್ರತಿಭಟನೆ ನಡೆಸಲು ಜಮಾಯಿಸಿದ್ದ ನೂರಾರು ವಿದ್ಯಾರ್ಥಿಗಳನ್ನು ಬುಧವಾರ ಬಂಧಿಸಲಾಗಿತ್ತು. ಬಂಧಿತರಲ್ಲಿ ಹೆಚ್ಚಿನವರನ್ನು ಬುಧವಾರ ಸಂಜೆಯೇ ಬಿಡುಗಡೆ ಮಾಡಲಾಗಿತ್ತು. ಉಳಿದ 13 ಮಂದಿಯನ್ನು ಇಂದು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

SCROLL FOR NEXT