ಗ್ರೆನೇಡ್ 
ದೇಶ

ಜಮ್ಮು-ಕಾಶ್ಮೀರದ ಮಾಜಿ ಶಾಸಕನ ನಿವಾಸದಲ್ಲಿ ಗ್ರೆನೇಡ್: ತನಿಖೆ

ಜಮ್ಮು-ಕಾಶ್ಮೀರದ ಪೂಂಚ್ ಪ್ರದೇಶದಲ್ಲಿ ಮಾಜಿ ಶಾಸಕನ ನಿವಾಸದಲ್ಲಿ ಗ್ರೆನೇಡ್ ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದ ಪೂಂಚ್ ಪ್ರದೇಶದಲ್ಲಿ ಮಾಜಿ ಶಾಸಕನ ನಿವಾಸದಲ್ಲಿ ಗ್ರೆನೇಡ್ ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

ಸುರನ್ಕೋಟ್ ನ ಮಾಜಿ ಶಾಸಕ  ಚೌಧರಿ ಮೊಹಮ್ಮದ್ ಅಕ್ರಮ್ ಅವರ ನಿವಾಸದ ಹೊರ ಭಾಗದಲ್ಲಿ ಒಂದು ಗ್ರೆನೇಡ್ ಪತ್ತೆಯಾಗಿದ್ದು, ಪ್ರಾಸಂಗಿಕವಾಗಿ ನಾಲ್ಕು ದಿನಗಳ ಹಿಂದೆ ಲಘು ಸ್ಫೋಟ ಸಂಭವಿಸಿತ್ತು. 

ಪೂಂಚ್ ನಲ್ಲಿ ಸೇನೆ ಬುಧವಾರ (ಜ.25) ರಂದು ಸೇನೆ ಉಗ್ರರ ಎರಡು ಅಡಗುದಾಣಗಳನ್ನು ಪತ್ತೆ ಮಾಡಿತ್ತು ಹಾಗೂ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿತ್ತು. 

ಒಂದು ಅಡಗುದಾಣ ರಟ್ಟಾ ಜಬಾರದ ಅರಣ್ಯದಲ್ಲಿ ಪತ್ತೆಯಾಗಿದ್ದರೆ, ಮತ್ತೊಂದು ಧೋಬಾ ಅರಣ್ಯದಲ್ಲಿ ಪತ್ತೆಯಾಗಿದೆ ಎಂದು ಸೇನೆ ಮಾಹಿತಿ ನೀಡಿದೆ.

ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವುದಕ್ಕೆ ಜಮ್ಮು-ಕಾಶ್ಮೀರ ಸರ್ಕಾರ ಭಯೋತ್ಪಾದನಾ ನಿಗಾ ಗುಂಪು ಸ್ಥಾಪಿಸಿದ್ದು 2 ವಿವಿಧ ಹುದ್ದೆಗಳನ್ನು ಈ ಸ್ಕ್ವಾಡ್ ಅಡಿಯಲ್ಲಿ ಸೃಷ್ಟಿಸಿದೆ. ಇನ್ನು ಜಮ್ಮು-ಕಾಶ್ಮೀರ ಪೊಲೀಸರು ಉಗ್ರ ಸಂಘಟನೆ ಸೇರಲು ಯತ್ನಿಸುತ್ತಿದ್ದ 5 ಮಂದಿ ಯುವಕರನ್ನು ತಡೆದಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ